ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ: ಕರವೇ ಕಾರ್ಯಕರ್ತರು ವಶಕ್ಕೆ

Bharath Vaibhav
ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ: ಕರವೇ ಕಾರ್ಯಕರ್ತರು ವಶಕ್ಕೆ
WhatsApp Group Join Now
Telegram Group Join Now

ಬೆಳಗಾವಿ: ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ಶಿವೇಂದ್ರರಾಜೇ ‘ಜೈ ಮಹಾರಾಷ್ಟ್ರ,’ ಎಂದು ಘೋಷಣೆ ಕೂಗಿದರೂ ಮೌನ ವಹಿಸಿದ ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಮಹಾನಗರ ಪಾಲಿಕೆ ಕಚೇರಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ರಾಣಿ ಚನ್ನಮ್ಮನ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಮಹಾನಗರ ಪಾಲಿಕ ಕಚೇರಿಯವರೆಗೆ ಮೆರವಣಿಗೆ ನಡೆಸಿದರು. ‘ನಾಡದ್ರೋಹಿಗಳ ವಿರುದ್ಧ ಕ್ರಮವಾಗಲಿ’ ಎಂದು ಘೋಷಣೆ ಕೂಗಿದರು.

ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ನಾಡವಿರೋಧಿ ಘೋಷಣೆ ಕೂಗಿದರು. ಆದರೆ, ಅದೇ ಕಾರ್ಯಕ್ರಮದಲ್ಲಿದ್ದ ಶಾಸಕ ಅಭಯ ಪಾಟೀಲ, ಮೇಯರ್ ಸವಿತಾ ಕಾಂಬಳ, ಉಪಮೇಯರ್ ಆದ ಆನಂದ್  ಚವ್ಹಾಣ ಸುಮ್ಮನಿದ್ದದ್ದು ಸರಿಯಲ್ಲ. ಅವರೆಲ್ಲರ ಸದಸ್ಯತ್ವ ರದ್ದುಗೊಳಿಸಬೇಕು. ಬೆಳಗಾವಿ ಪಾಲಿಕೆಯನ್ನು ವಿಸರ್ಜಿಸಬೇಕು’ ಎಂದು ಆಗ್ರಹಿಸಿದರು.

ಮಹಾರಾಷ್ಟ್ರದಿಂದ ಆಗಾಗ ಬೆಳಗಾವಿಗೆ ಬರುವ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿ, ಗಡಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ಮಧ್ಯೆ, ವಿಷಬೀಜ ಬಿತ್ತುವ ಕೆಲಸ ಮಾಡುತ್ತಲೇ ಇದ್ದಾರೆ. ಅಂಥವರ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಘಟಕದ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ, ಗಣೇಶ ರೋಕಡೆ ನೇತೃತ್ವ ವಹಿಸಿದ್ದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!