Ad imageAd image

ಮತ್ತೆ ಒಂದಾಗಲೂ ಒಪ್ಪಿದ ನಟ ಅಜಯ್ ರಾವ್ ದಂಪತಿ 

Bharath Vaibhav
ಮತ್ತೆ ಒಂದಾಗಲೂ ಒಪ್ಪಿದ ನಟ ಅಜಯ್ ರಾವ್ ದಂಪತಿ 
WhatsApp Group Join Now
Telegram Group Join Now

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಸುದ್ದಿ ಅಭಿಮಾನಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಆಘಾತವನ್ನುಂಟು ಮಾಡಿತ್ತು. ಆದರೆ ಇದೀಗ ಸ್ವತಃ ಅಜಯ್ ರಾವ್ ಪತ್ನಿ ಸ್ವಪ್ನಾ ರಾವ್ ತಾವು ಮತ್ತೆ ಒಂದಾಗುವುದಾಗಿ ತಿಳಿಸುವ ಮೂಲಕ ಸಿಹಿ ಸುದ್ದಿ ನೀಡಿದ್ದಾರೆ.

ಅಜಯ್ ರಾವ್ ಪತ್ನಿ ಸ್ವಪ್ನಾ, ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಅಲ್ಲದೇ ಕೌಟುಂಬಿಕ ದೌರ್ಜನ್ಯ ಕೇಸ್ ಕೂಡ ದಾಖಲಿಸಿದ್ದರು.

ಈ ಘಟನೆ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸ್ವಪ್ನಾ ರಾವ್ ತಾವು ಮತ್ತೆ ಒಂದಾಗುತ್ತಿರುವುದಾಗಿ ಹಾಗೂ ಹೊಂದಾಣಿಕೆಯಿಂದ ಜೀವನ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ. ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ತೀವ್ರವಾಗಿ ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಿದ್ದೇನೆ.

ಪ್ರಿಯ ಸ್ನೇಹಿತರೇ ಹಾಗೂ ಸಹೋದರರೇ, ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್ ನಿರ್ಮಿಸಿಕೊಳ್ಳಲು ಮತ್ತು ನಮ್ಮ ದಾಂಪತ್ಯ ಜೀವನವನ್ನು ಪುನಃ ಸ್ಥಾಪಿಸಲು ನಿಮ್ಮ ಹಾರೈಕೆಗಳು ಹಾಗೂ ಪ್ರಾರ್ಥನೆಗಳನ್ನು ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ.

ನಾನು ಅತ್ಯಂತ ಗೌರವದಿಂದ ತಿಳಿಸಲು ಬಯಸುವುದೇನಂದರೆ ಈ ವಿಷಯವು ನಮ್ಮ ವೈಯಕ್ತಿಕ, ಆಳವಾದ ಭಾವನಾತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂಧಿಸಿದ್ದು ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ತಿಳಿಸಲು ಬಯಸುತ್ತೇನೆ. ಕೃತಜ್ಞತೆಗಳೊಂದಿಗೆ ಸ್ವಪ್ನಾ ಅಜಯ್ ರಾವ್ ಎಂದು ಬರೆದುಕೊಂಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!