ಹೈದ್ರಾಬಾದ್ : ಹೈದರಾಬಾದ್ ನಲ್ಲಿ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ಅಲ್ಲು ಅರ್ಜುನ್ ಅವರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.
ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅವರ ನಿವಾಸದ ಬಳಿ ಬಂಧಿಸಿ ಠಾಣೆಗೆ ಕರೆದೊಯ್ದರು.ಬಳಿಕ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಾಂಪಲ್ಲಿ ಕೋರ್ಟಿಗೆ ವಿಚಾರಣೆಗೆ ಹಾಜರುಪಡಿಸಿದ್ದರು. ಇದೀಗ ನಾಂಪಲ್ಲಿ ಕೋರ್ಟ್ ಅಲ್ಲು ಅರ್ಜುನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ವಿರುದ್ಧ IPC ಸೆಕ್ಷನ್ 105, 118(1), ಮತ್ತು BNS 3(5) ಅಡಿಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಗಳು ಸಾಮಾನ್ಯವಾಗಿ ತೊಂದರೆಗಳನ್ನು ಉಂಟುಮಾಡುವ, ಅಜಾಗರೂಕತೆ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಹಾನಿ ಮಾಡಿದ ಪ್ರಕರಣಗಳಿಗೆ ಸಂಬಂಧಿಸುತ್ತವೆ.