ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಸ್ವಇಚ್ಛಾ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಕೊಲೆ ಪ್ರಕರಣ ನಡೆದ ಸ್ಥಳ ಮಹಜರು ವೇಳೆ ಪತ್ತೆಯಾದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.
ತಾಂತ್ರಿಕ ಸಾಕ್ಷ್ಯ, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಸಾಂಧರ್ಭಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ತನಿಖೆಗೆ ಬೇಕಾದ ಅಗತ್ಯ ಸಾಕ್ಷ್ಯಗಳನ್ನು ಇಟ್ಟುಕೊಂಡಿದ್ದಾರೆ. ಬಹುತೇಕ ಕೊಲೆ ಪ್ರಕರಣ ಅಂತಿಮ ಹಂತಕ್ಕೆ ಬಂದಿದೆ.
ಪೊಲೀಸರು ನಾಳೆ ಕೊಲೆ ಆರೋಪಿಗಳನ್ನು ಕೋರಮಂಗಲದ ಜಡ್ಜ್ ಮುಂದೆ ಹಾಜರಪಡಿಸಲು ಸಿದ್ದತೆ ನಡೆಸಲಾಗಿದ್ದು, ನಾಳೆ ಕೋರ್ಟ್ ಅನುಮತಿ ಪಡೆದು ದರ್ಶನ್ ಮತ್ತು ಸಹಚರರನ್ನು ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಿದ್ದಾರೆ ಎನ್ನಲಾಗಿದೆ.