ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನವಾಗಿದ್ದು, ಇಂದು ಅವರ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು.
ಈ ಹಿನ್ನೆಲೆ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲದ ನಟ ದರ್ಶನ್ ರನ್ನು ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಆಗಸ್ಟ್ 1 ರವರೆಗೆ ನಟ ದರ್ಶನ್ & ಗ್ಯಾಂಗ್ ಗೆ ಪರಪ್ಪನ ಅಗ್ರಹಾರ ಫಿಕ್ಸ್ ಆಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ 1 ತಿಂಗಳು ಕಳೆದಿದ್ದು, ಜೈಲಿನಲ್ಲಿ ದಾಸ ಚಡಪಡಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೂನ್ 11 ರಂದು ಬಂಧನಕ್ಕೊಳಗಾಗಿದರು. ಅಂದಿನಿಂದ ಇಂದಿನವರೆಗೂ ದರ್ಶನ್ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ನಟ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಂದಿದೆ ಎಂಬ ಆರೋಪವಿದೆ.