Ad imageAd image
- Advertisement -  - Advertisement -  - Advertisement - 

ಇಂದು ಮಧ್ಯಾಹ್ನವೇ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್

Bharath Vaibhav
ಇಂದು ಮಧ್ಯಾಹ್ನವೇ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್
WhatsApp Group Join Now
Telegram Group Join Now

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ವಿಚಾರ ಸಂಬಂಧ ಕಾರಾಗೃಹ ಇಲಾಖೆಯು ಇಂದು ಮಧ್ಯಾಹ್ನವೇ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದೆ.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು.ಅಲ್ಲಿ ಅವರಿಗೆ ರಾಜಾತಿಥ್ಯ ನೀಡುತ್ತಿದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಸರ್ಕಾರ ಕಾರಾಗೃಹ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಪ್ರಕರಣದಲ್ಲಿ ಹೊಣೆ ಮಾಡಿ ಅಮಾನತುಗೊಳಿಸಿತ್ತು.

ಈ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವ ಸಂಬಂಧ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿಯಾಗಿರುವಂತ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಶಿಫ್ಟ್ ಮಾಡಲಿದೆ.

 

WhatsApp Group Join Now
Telegram Group Join Now
Share This Article
error: Content is protected !!