ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದ್ದು, ಆರೋಪಿಗಳಿಗೆ ಜೈಲುವಾಸವೇ ಗತಿಯಾಗಿದೆ.
ಕೊಲೆ ಕೇಸ್ ನಲ್ಲಿ ಅಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಿತ್ತು.ಈ ಹಿನ್ನೆಲೆಯಲ್ಲಿ ಜೈಲಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು.
ಪರಪ್ಪನ ಅಗ್ರಹಾರದಿಂದ 13 ಆರೋಪಿಗಳು ಹಾಗೂ ತುಮಕೂರು ಜೈಲಿನಿಂದ ನಾಲ್ವರು ಆರೋಪಿಗಳು ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್, ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 14ರವರೆಗೆ ವಿಸ್ತರಿಸಿ ಆದೇಶ ನೀಡಿದೆ.