ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಕಾಮೆಂಟ್ ಮಾಡಿದ ಸಂಬಂಧ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಜಯಲಕ್ಷ್ಮೀಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದಂತ ಪ್ರಕರಣಕ್ಕೆ ಸಂಬಂಧಿಸಿದಂತ ಇಂದು ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆಯ ಬೀಳಗಿ ಮೂಲದ ಧರಿಯಪ್ಪ ಎಂಬುದಾಗಿ ತಿಳಿದು ಬಂದಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಧರಿಯಪ್ಪ ಬಂಧನದ ಬಳಿಕ, ಅಶ್ಲೀಲ ಕಾಮೆಂಟ್ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾದಂತೆ ಆಗಿದೆ.




