ಬೆಂಗಳೂರು : ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕಮೆಂಟ್ಸ್ ಹಾಕಿದ್ದ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಪೆಟ್ರೋಲ್ ಬಂಕ್ ನ ಮ್ಯಾನೇಜರ್ ನಾಗರಾಜ ಗುಳ್ಳಪ್ಪ ತಳವಾರ ಹಾಗೂ ಧಾರವಾಡದ ಆಡಿಟರ್ ಪ್ರಶಾಂತ್ ತಳವಾರ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಇಲ್ಲಿಯವರೆಗೆ 4 ಆರೋಪಿಗಳು ಬಂಧಿಸಿದಂತಾಗಿದೆ.




