ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್.
ಬಂಧಿತ ಆರೋಪಿಗಳಲ್ಲಿ ನಿತಿನ್ (31) ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಮೂಲತಃ ದಾವಣಗೆರೆಯವನು.ಮತ್ತೊಬ್ಬ ಆರೋಪಿ 45 ವರ್ಷದ ಚಂದ್ರಶೇಖರ್ ಆಟೋ ಚಾಲಕನಾಗಿದ್ದು ಬೆಂಗಳೂರಿನ ಚಿಕ್ಕಬಣಾವರ ನಿವಾಸಿ.
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಇತರ ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದಾರೆ. ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ದ ದೂರು ನೀಡಿದ್ದರು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.




