ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದಿದ್ದಾರೆ.
ಜೈಲಿಗೆ ಭೇಟಿ ನೀಡಿ ಪತಿಗೆ ಧೈರ್ಯ ತುಂಬುತ್ತಿರುವ ವಿಜಯಲಕ್ಷ್ಮಿ ಕಾನೂನು ಹೋರಾಟ ನಡೆಸುವ ಬಗ್ಗೆ ವಕೀಲರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.ಇತ್ತೀಚೆಗಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು.
ಈಗ ದೇವರ ಮೊರೆ ಹೋಗಿರುವ ವಿಜಯಲಕ್ಷ್ಮಿ ಗುರುವಾರ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆಪ್ತರೊಂದಿಗೆ ಕೊಲ್ಲೂರಿಗೆ ಆಗಮಿಸಿದ ವಿಜಯಲಕ್ಷ್ಮಿ ಅವರು ಶುಕ್ರವಾರ ಬೆಳಗ್ಗೆ ನವ ಚಂಡಿಕಾ ಹೋಮ ನಡೆಸಲಿದ್ದಾರೆ ಎಂದು ಹೇಳಲಾಗಿದೆ.