Ad imageAd image

ಕಾಲೇಜು ಕ್ಯಾಂಪನ್‌ನಲ್ಲಿ ಆಗಿರುವ ಇಂಥ ಹತ್ಯೆ ಆತಂಕ ಮೂಡಿಸಿದೆ : ನಟ ಧ್ರುವ ಸರ್ಜಾ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತೆ ನಿನ್ನೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠಳನ್ನು ಬರ್ಬರವಾಗಿ ಕೊಲೆಗೈಯಲಾಗಿದೆ. ಇದೀಗ ಇದಕ್ಕೆ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ನೇಹಾಳ ಹತ್ಯೆಯ ಕುರಿತು ಸಂತಾಪ ಸೂಚಿಸಿದ್ದಾರೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜ್‌ನಲ್ಲಿ ದಾರುಣವಾಗಿ ಹತ್ಯೆಯಾದ ನೇಹಾ ಹೀರೇಮಠ್‌ ಸಾವಿಗೆ ಕಂಬನಿ ಮಿಡಿದ್ದಾರೆ.ಕಾಲೇಜು ಕ್ಯಾಂಪನ್‌ನಲ್ಲಿ ಆಗಿರುವ ಇಂಥ ಹತ್ಯೆ ಆತಂಕ ಮೂಡಿಸಿದೆ ಎಂದೂ ಅವರು ಟ್ವೀಟ್‌ ಮಾಡಿದ್ದಾರೆ.

ಟ್ವೀಟ್ ನಲ್ಲಿ ನೇಹಾ ಸಾವಿಗೆ ಸಂತಾಪ ಸೂಚಿಸಿದ ಅವರು, ಸಹೋದರಿ ನೇಹಾ ಹಿರೇಮಠ್‌ರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು.

ಹಾಗೂ ಇದನ್ನ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ’ ಎಂದು ಧ್ರುವ ಸರ್ಜಾ ಟ್ವೀಟ್‌ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!