Ad imageAd image

ನಟ ಕಮಲ್ ಹಾಸನ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿರ್ಬಂಧಿಸಬೇಕು :   ಸಚಿವ ಶಿವರಾಜ್ ತಂಗಡಗಿ

Bharath Vaibhav
ನಟ ಕಮಲ್ ಹಾಸನ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿರ್ಬಂಧಿಸಬೇಕು :   ಸಚಿವ ಶಿವರಾಜ್ ತಂಗಡಗಿ
WhatsApp Group Join Now
Telegram Group Join Now

ಬೆಂಗಳೂರು: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ಬಹುಭಾಷಾ ನಟ ಕಮಲ್ ಹಾಸನ್ ತಮ್ಮ ಹೇಳಿಯನ್ನು ಸಮರ್ಥಿಸಿಕೊಂಡಿದ್ದೂ ಅಲ್ಲದೇ ತಾನು ಕ್ಷಮೆ ಕೇಳು ಎಂದು ಉದ್ಘಟತನ ಮೆರೆದಿದ್ದಾರೆ. ಇದರಿಂದ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ.

ಈ ನಡುವೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕಮಲ್ ಹಾಸನ್ ಚಿತ್ರಗಳಿಗೆ ಕರ್ನಾಟಕದಲ್ಲಿ ನಿಷೇಧ ಹೇರುವಂತೆ ಕರ್ನಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.
ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಅವರ ಚಲನಚಿತ್ರಗಳನ್ನು ಕರ್ನಾಟಕದಲ್ಲಿ ನಿರ್ಬಂಧಿಸಬೇಕು ಎಂದು ಸಚಿವರು ಪತ್ರದ ಮೂಲಕ ಆಗ್ರಹಿಸಿದ್ದಾರೆ.

ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆಯ ಕುರಿತಾಗಿ ಅವಹೇಳನಕಾರಿಯಾಗಿ ಮತನಾಡಿದ್ದಾರೆ. ಅವರ ಮಾತು ಕನ್ನಡಿಗರಿಗೆ ಹಾಗೂ ನಮಗೆ ತೀವ್ರವಾದ ನೋವುಂಟುಮಾಡಿದೆ. ಕಮಲ್ ಹಾಸನ್ ಮಾತಿನಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆಯುಂಟಾಗಿದೆ. ಕಮಲ್ ಹಾಸನ್ ಓರ್ವ ಹಿರಿಯ ನಟರಾಗಿ, ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದವರಾಗಿ, ಕನ್ನಡ ಭಾಷೆಯ ಬಗ್ಗೆ ತಿಳಿದವರಾಗಿಯೂ ಕನ್ನಡದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದು ಖಂಡನೀಯ. ಇಂತಹ ಮಾತುಗಳು ಅವರಿಗೆ ಶೋಭೆತರುವುದಿಲ್ಲ. ಕನ್ನಡದ ನೆಲ, ಜಲ ಹಾಗೂ ಭಾಷ ವಿಚಾರದಲ್ಲಿ ಯಾರೇ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅವರಿಂದ ಇಂತಹ ಹೇಳಿಕೆ ಸಹಿಸಲು ಸಾಧ್ಯವಿಲ್ಲ. ಆದ್ದರಿಂದ ಕಮಲ್ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!