ಬೆಂಗಳೂರು: “ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ” ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ನನಗೆ ತುಂಬಾ ಇಷ್ಟವಾಯಿತು. ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು? ಎಂದು ನಟ ಕಿಶೋರ್ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿ ಪ್ರಧಾನ ಹಾಗೂ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರಂಥ ವ್ಯಕ್ತಿತ್ವ ಇರುವುದು ಬಹಳ ಮುಖ್ಯ ಎಂದರು.
ಸುಲೋಚನಾ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಚಲನಚಿತ್ರೋತ್ಸವಕ್ಕೆ ತೆರೆ ಬಿದ್ದಿತು. ಕಿಶೋರ್ ಅವರು ಮುಖ್ಯಮಂತ್ರಿಗಳ ಹೇಳಿಕೆಯನ್ನು ಬೆಂಬಲಿಸಿ, “ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು?” ಎಂದು ಮರು ಪ್ರಶ್ನಿಸಿದರು.




