ಅಮೆರಿಕದಲ್ಲಿ ಕ್ಯಾನ್ಸರ್ ಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಗೆದ್ದಿದ್ದು, ಅಭಿಮಾನಿಗಳಿಗೆ, ಹಿತೈಷಿಗಳಿಗೆ ಭಾವುಕ ಸಂದೇಶ ರವಾನೆ ಮಾಡಿದ್ದಾರೆ.
ಈ ಕುರಿತು ಸಮಾಜಿಕ ಜಾಲತಾಣದಲ್ಲಿ ಸೋಶಿಯಲ್ ವಿಡಿಯೋ ಹಂಚಿಕೊಂಡ ನಟ ಶಿವಣ್ಣ ನಿಮ್ಮ ಆಶೀರ್ವಾದ , ಪ್ರೀತಿ ವಿಶ್ವಾಸ ಇರುವವರೆಗೂ ನನಗೆ ಏನಾಗಲ್ಲ. ಮತ್ತೆ ಸಿನಿಮಾ ಮಾಡುತ್ತೇನೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಹೇಳಿದ್ದಾರೆ.
ಇನ್ನು ಶಸ್ತ್ರಚಿಕಿತ್ಸೆಯ ನಂತರ ಆರೋಗ್ಯದ ವರದಿಗಳು ನೆಗೇಟಿವ್ ಬಂದಿದೆ ಎಂದು ತಿಳಿಸಿದರು. ಇತ್ತೀಚಿಗೆ ಶಸ್ತ್ರಚಿಕಿತ್ಸೆಗೊಳಗಾಗಿರುವ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಜನವರಿ ಅಂತ್ಯದಲ್ಲಿ ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.