ಬೆಂಗಳೂರು : ವಿಐಪಿ ಸಂಚಾರದ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಉಂಟಾಗುವ ತೊಂದರೆ ತಾಳ್ಮೆ ಪರೀಕ್ಷೆ ಮಾಡುತ್ತೆ.ಈ ಬಗ್ಗೆ ನಟಿ ಪ್ರಣೀತಾ ಸುಭಾಷ್ ತಮ್ಮ ಸ್ವಂತ ಅನುಭವ ಹಂಚಿಕೊಂಡಿದ್ದು ಬೇಸರ ವ್ಯಕ್ತಪಡಿಸಿದ್ದಾರೆ.
ಕೋರಮಂಗಲ ಅಂದ್ರೆ ಅಲ್ಲಿನ ಟ್ರಾಫಿಕ್ ಹೇಗಿರತ್ತೆ ಅಂತ ಮತ್ತೊಮ್ಮೆ ವಿವರಿಸೋದೇ ಬೇಡ.ಆದ್ರೆ ಜರ್ಮನಿಯ ಚಾನ್ಸಿಲರ್ ಆಗಮನದ ಹಿನ್ನೆಲೆಯಲ್ಲಿ ಇಲ್ಲಿನ ಹಲವು ಮಾರ್ಗಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಹೀಗಾಗಿ ಜನಸಾಮಾನ್ಯರಿಗೆ ತೊಂದರೆ ಉಂಟಾಗಿತ್ತು.
ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ನಟಿ ಪ್ರಣೀತಾ ಸುಭಾಷ್ ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೀಗೆ ವಿ.ಐ.ಪಿ ಸಂಚಾರಕ್ಕೆ ರಸ್ತೆಗಳನ್ನು ಬಂದ್ ಮಾಡಿದ್ರೆ, ಜನ ಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕ್ರಮಗಳು ನಮ್ಮ ದೇಶದ ಅಭಿವೃದ್ಧಿಗೆ ಸಹಕಾರಿಯಲ್ಲ ಎಂದು ಪೋಸ್ಟ್ ಮಾಡಿದ್ದಾರೆ.




