Ad imageAd image

ನಮ್ಮ ಕಲೆಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕೆವಾಗಿ ಜೂಮ್‌ : ನಟಿ ಸಪ್ತಮಿ ಗೌಡ ಕಿಡಿ 

Bharath Vaibhav
ನಮ್ಮ ಕಲೆಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕೆವಾಗಿ ಜೂಮ್‌ : ನಟಿ ಸಪ್ತಮಿ ಗೌಡ ಕಿಡಿ 
WhatsApp Group Join Now
Telegram Group Join Now

ನಟಿಯರು ಕಾರ್ಯಕ್ರಮಕ್ಕೆ ಆಗಮಿಸಿದಾಗ ದೇಹವನ್ನು ಜಾಸ್ತಿ ಝೂಮ್ ಮಾಡಿ ಫೋಟೋ, ವಿಡಿಯೋ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಹಾಕುವ ವಿರುದ್ಧ ನಟಿ ಸಪ್ತಮಿ ಗೌಡ ಸಿಡಿದೆದ್ದಿದ್ದಾರೆ.

ಲೈಕ್ಸ್, ಕಮೆಂಟ್ ಮತ್ತು ವೀವ್ಸ್ ಪಡೆಯುವ ಉದ್ದೇಶದಿಂದ ನಟಿಯನ್ನು ಕೆಟ್ಟದಾಗಿ ಚಿತ್ರೀಕರಿಸುವವರ ವಿರುದ್ಧ ಅವರು ಧ್ವನಿ ಎತ್ತಿದ್ದಾರೆ.

ಸಪ್ತಮಿ ಗೌಡ ಪೋಸ್ಟ್‌ಗೆ ಹಲವಾರು ಜನರು ಬೆಂಬಲಿಸಿದ್ದಾರೆ.ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸ್ಟೋರಿ ಹಾಕಿರುವ ಸಪ್ತಮಿ ಗೌಡ ಈ ವಿಚಾರದ ಕುರಿತು ಧ್ವನಿ ಎತ್ತಿದ್ದಾರೆ.

ಪೋಸ್ಟ್ ಹೀಗಿದೆ..

ಚಿತ್ರರಂಗದಲ್ಲಿರುವ ಮಹಿಳೆಯರಾಗಿ,ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೋಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ನಮ್ಮ ಕಲೆಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕೆವಾಗಿ ಜೂಮ್‌ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ.

ಇಂತಹ ವರ್ತನೆ, ಕೆಲವರಿಂದ ನಡೆಯುತ್ತಿರುವುದಾದರೂ, ಅದು ಅಸಭ್ಯ, ಅವಮಾನಕಾರಿ ಮತ್ತು ಸಂಪೂರ್ಣವಾಗಿ ಅಸ್ವೀಕಾರಾರ್ಹವಾಗಿದೆ. ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ.

ನಾವು ಇಲ್ಲಿ ನಮ್ಮ ಸಿನೆಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡುವುದು ಮತ್ತು ಅಸಭ್ಯ ಕೋನಗಳಿಂದ ಬಳಸುವುದು ನಮ್ಮ ಗೌರವಕ್ಕೆ ಸ್ಪಷ್ಟ ಧಕ್ಕೆ ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ, ಸಹಿಸುವುದಿಲ್ಲ.

ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತಗೌರವ ಮತ್ತು ಶಿಸ್ತನ್ನು ಕಾಪಾಡೆಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಈ ಗಡಿರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ.

ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮಧ್ವನಿ ಮುಂದುವರೆಯುತ್ತದೆ ಎಂದು ಸಪ್ತಮಿ ಗೌಡ ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!