ಬೆಂಗಳೂರು : ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ಶಾನ್ವಿ ಶ್ರೀವಾತ್ಸವ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಕುಟುಂಬದೊಂದಿಗೆ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ.
2012ರಲ್ಲಿ ತೆರೆ ಕಂಡ ತೆಲುಗಿನ ‘ಲವ್ಲಿ’ ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ಇವರು ಬಳಿಕ ‘ಅಡ್ಡ’ ಚಿತ್ರದಲ್ಲಿ ತೆರೆ ಹಂಚಿಕೊಂಡರು.
ಚಿರಂಜೀವಿ ಸರ್ಜಾ ಜೊತೆ ‘ಚಂದ್ರಲೇಖ’ ದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದ ಇವರಿಗೆ ಭರ್ಜರಿ ಯಶಸ್ಸು ಸಿಕ್ಕಿತು.
ಕಳೆದ ವರ್ಷ ಕನ್ನಡದ ‘ಬ್ಯಾಂಗ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ, ಶಾನ್ವಿ ಮರಾಠಿಯ ‘ರಾಂತಿ’ ಯಲ್ಲಿ ಅಭಿನಯಿಸಿದ್ದರು, ಈ ಸಿನಿಮಾ ಕಳೆದ ತಿಂಗಳು ಬಿಡುಗಡೆಯಾಗಿದ್ದು, ಸೂಪರ್ ಡೂಪರ್ ಹಿಟ್ ಆಗಿದೆ. ಇತ್ತೀಚಿಗೆ ‘ತ್ರಿಶೂಲಂ’ ಶೂಟಿಂಗ್ ನಲ್ಲಿ ಬಿಜಿಯಾಗಿದ್ದು, ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.