ನಟಿ ವೈಷ್ಣವಿಗೌಡ ಅವರು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಅವರು ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನಟಿ ನಿಶ್ಚಿತಾರ್ಥ ಆಗಿರೋದು ಅಭಿಮಾನಿಗಳಿಗೆ ಶಾಕ್ ಹಾಗೂ ಖುಷಿ ಎರಡನ್ನೂ ನೀಡಿದೆ. ಅವರಿಗೆ ಎಲ್ಲ ಕಡೆಗಳಿಂದ ಅಭಿನಂದನೆಗಳು ಬರುತ್ತಿವೆ.
ವೈಷ್ಣವಿ ಗೌಡ ಅವರು ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ತಮಗೆ ಮದುವೆ ಬಗ್ಗೆ ಇರುವ ಕನಸುಗಳ ಬಗ್ಗೆ ಹೇಳಿಕೊಂಡಿದ್ದರು. ಮದುವೆನ ಹೀಗೆ ಆಗ್ತೀನಿ, ಹಾಗೆ ಆಗ್ತೀನಿ ಎಂದೆಲ್ಲ ವಿವರಿಸಿದ್ದರು. ಅವರಿಗೆ ಸಾಕಷ್ಟು ಮದುವೆ ಆಫರ್ಗಳು ಬಂದರೂ ಅದನ್ನು ಒಪ್ಪಿಲ್ಲ ಎಂದಿದ್ದರು. ಈಗ ವೈಷ್ಣವಿ ಗೌಡ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಅವರ ಎಂಗೇಜ್ಮೆಂಟ್ ಫೋಟೋ ಹಾಗೂ ವಿಡಿಯೋಗಳನ್ನು ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.
ವೈಷ್ಣವಿ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಪಾತ್ರ ಸಾಕಷ್ಟು ಗಮನ ಸೆಳೆದಿದೆ. ಈ ಧಾರಾವಾಹಿಯ ಕಲಾವಿದೆ ಮೇಘನಾ ಶಂಕರಪ್ಪ ಅವರು ಇತ್ತೀಚೆಗೆ ವಿವಾಹ ಆಗಿದ್ದರು. ಈಗ ಧಾರಾವಾಹಿ ತಂಡದಲ್ಲಿ ಮತ್ತೊಂದು ಮದುವೆ ನೆರವೇರುತ್ತಿದೆ.