Ad imageAd image

ತಾಲೂಕಿನಾದ್ಯಂತ ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ

Bharath Vaibhav
ತಾಲೂಕಿನಾದ್ಯಂತ ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ
WhatsApp Group Join Now
Telegram Group Join Now

ಹುಕ್ಕೇರಿ : -ತಾಲೂಕಿನಾದ್ಯಂತ ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು,ಅಧಿಕಾರಿಗಳು ಶ್ರಮಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಶಾನೂಲ್ ತಹಶೀಲ್ದಾರ ಸೂಚಿಸಿದರು.

ಇಲ್ಲಿನ ಪುರಸಭೆ ಸಭಾಭವನದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳ ಪರವಾಗಿ ರಾಜ್ಯಾದ್ಯಂತ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ವಿದ್ಯಾರ್ಥಿಗಳಿಗೆ, ಗೃಹಿಣಿಯರಿಗೆ, ವಿದ್ಯುತ್ ಗ್ರಾಹಕರಿಗೆ ಹಾಗೂ ಯುವಕರಿಗೆ ಸೇರಿದಂತೆ ಸಮಾಜದ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತಿದೆ. ಸಾರ್ವಜನಿಕರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಇದರ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

“ಪುರಸಭೆ ನೂತನ ಅಧ್ಯಕ್ಷರಾದ ಇಮ್ರಾನ್ ಮೋಮಿನ್ ಮಾತನಾಡಿ,
ಹಾಗೂ ಇನ್ನುಳಿದ ಪುರಸಭೆ ಸದಸ್ಯರು ಪಾಲ್ಗೊಂಡಿದ್ದರು.ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ನೆಮ್ಮದಿ ಜೀವನ ಕಳೆಯುತ್ತಿದ್ದಾರೆ.

ಇದೇ ವೇಳೆ ವಿವಿಧ ಹಳ್ಳಿಗಳಿಂದ ಆಗಮಿಸಿದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಅಹವಾಲು ಆಲಿಸಿ ಸ್ಥಳದಲ್ಲಿಯೇ ಪರಿಹರಿಸುವಂತೆ ಸಂಬಂಧಿಸಿದವರಿಗೆ ಸೂಚಿಸಿದರು.ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್.ಮಲ್ಲಾಡದ, ಯೋಜನಾಧಿಕಾರಿ ಪ್ರಶಾಂತ ಮುನ್ನೋಳಿ, ಪುರಸಭೆ ಮುಖ್ಯಾಧಿಕಾರಿ ಈಶ್ವರ ಸಿದ್ನಾಳ,

ಸಮಿತಿ ಸದಸ್ಯರಾದ ಶ್ರೀನಿವಾಸ ವ್ಯಾಪಾರಿ, ಅಣ್ಣಾಗೌಡ ಪಾಟೀಲ, ಸುಭಾಷ ನಾಯಿಕ, ಶಾಂತಿನಾಥ ಮಗದುಮ್,ಆನಂದ ಖಾತೇದಾರ,
ಸಂಗೀತಾ ಮಾದರ, ಗೋದವ್ವ ಅಗಸರ, ವಿಠ್ಠಲ್ ಗುರವ
ದೇವರಾಜ್ ಚೌಗಲಾ ಸಿದ್ದಪ್ಪ ಶಿಳ್ಳಿ,ಅಬ್ದುಲಗನಿ ದರ್ಗಾ ಯಲ್ಲಪ್ಪ ಹೀರಿಕುಡಿ ಅರುಣ್ ಅತ್ತಿಮರದ  ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:-ಶಾಂತಿನಾಥ್ ಜಿ ಮಗದುಮ್

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!