ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಕೇಸ್‌ನ ಅರ್ಜಿಗಳ ವಿಚಾರಣೆ ಮುಂದೂಡಿಕೆಯಾಗಿದೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ಖುದ್ದು ಹಾಜರಾತಿಗೆ ನೀಡಿರುವ ವಿನಾಯ್ತಿ ಆದೇಶ ವಿಸ್ತರಿಸಿ, ವಿಚಾರಣೆಯನ್ನು ಡಿಸೆಂಬರ್ 2 ರಂದು ನಿಗದಿಪಡಿಸಿ ಕೋರ್ಟ್ ಆದೇಶ ಹೊರಡಿಸಿತು.
ಈ ಮಧ್ಯೆ ಯಡಿಯೂರಪ್ಪರವರಿಗೆ ಮಧ್ಯಂತರ ಜಾಮೀನು ನೀಡಿರುವುದನ್ನು ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿ ಆಲಿಸಿದ ಕೋರ್ಟ್, ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ (ಡಿ.2) ಹೈಕೋರ್ಟ್ ಮುಂದೂಡಿದೆ.
ಮಾಜಿ ಸಿಎಂ ಯಡಿಯೂರಪ್ಪ ತನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.