ಕೊಪ್ಪಳ: ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿಯಿಲ್ಲ. 2028ರವರೆಗೆ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರಲಿದ್ದಾರೆ.
ಆ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎಂಬುದು ನನ್ನ ಆಸೆಯಾಗಿದೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಆಗಬೇಕು ಎನ್ನುವಂತ ಆಸೆ ಎಲ್ಲರಿಗೂ ಇರುತ್ತದೆ. ಡಿ.ಕೆ ಶಿವಕುಮಾರ್ ಅವರ ಅಭಿಮಾನಿಗಳು ಕೂಡ ಆಸೆಯನ್ನು ಇಟ್ಟುಕೊಂಡಿರುತ್ತಾರೆ.
ಸಿಎಂ ಸಿದ್ಧರಾಮಯ್ಯ ಅವರಿಗೆ ಎಲ್ಲಾ ಶಾಸಕರ ಬೆಂಬಲವಿದ್ದು, ಅವರೇ ಪೂರ್ಣ ಅವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ. ಆ ಬಳಿಕ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು.
ಡಿ.ಕೆ ಶಿವಕುಮಾರ್ ಅವರು ಅಪಾರ ದೈವಭಕ್ತರಾಗಿದ್ದಾರೆ. ಮೊದಲಿನಿಂದಲೂ ಅವರು ದೇವಸ್ಥಾನಗಳಿಗೆ ಹೋಗುವುದು ಸಾಮಾನ್ಯವಾಗಿದೆ.
ಅವರು ದೇವಸ್ಥಾನಕ್ಕೆ ಹೋಗೋದಕ್ಕೂ, ಮುಖ್ಯಮಂತ್ರಿ ಸ್ಥಾನದ ಪೈಪೋಟಿಗೂ ಯಾವುದೇ ಸಂಬಂಧವಿಲ್ಲ. ನವೆಂಬರ್ ನಲ್ಲಿ ರಾಜ್ಯದಲ್ಲಿ ಯಾವುದೇ ಕ್ರಾಂತಿಯೂ ನಡೆಯೋದಿಲ್ಲ. ಇದೆಲ್ಲವೂ ಬಿಜೆಪಿಯ ಕಟ್ಟು ಕಥೆ ಎಂದರು.




