ಬೆಳಗಾವಿ : ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ. ಕೆಲ ಶಾಸಕರು ಸಿದ್ದರಾಮಯ್ಯನವರ ನಂತರ ಡಿಕೆಶಿ ಸಿಎಂ ಆಗಬೇಕು ಎಂದು ಹೇಳುತ್ತಿದ್ದರೂ, ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.
ಬೆಳಗಾವಿ ಅಧಿವೇಶನದ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಶುಭ ಸುದ್ದಿ ನಾನೇ ಕೊಡ್ತೀದ್ದೀನಲ್ಲ. ಬೆಳಗಾವಿ ಅಧಿವೇಶನದ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ. ಇದರಲ್ಲಿ ತಪ್ಪೇನಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಇಕ್ಬಾಲ್ ಹುಸೇನ್ ಹೇಳಿದ್ದಾರೆ.




