ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರ ದಿವಾಳಿ ಆಗಲಿದೆ ಹಾಗೂ ಆರೋಗ್ಯ ಸರಿಯಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಜೈಲೂಟ ಫಿಕ್ಸ್ ಎಂದು ಶಾಸಕ ಬಸವನಗೌಡ ಯತ್ನಾಳ್ ಚಾಮರಾಜನಗರದಲ್ಲಿ ಭವಿಷ್ಯ ನುಡಿದಿದ್ದಾರೆ.
ಚಾಮರಾಜನಗರದಲ್ಲಿ ಬರ ಅಧ್ಯಯನ ನಡೆಸಿ ಮಾಧ್ಯಮವರೊಟ್ಟಿಗೆ ಮಾತನಾಡಿದ ಅವರು, ಡಿಸೆಂಬರ್ ವೇಳೆಗೆ ರಾಜ್ಯ ಸರ್ಕಾರ ದಿವಾಳಿ ಆಗುತ್ತದೆ.
ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ, ಮತ್ತೊಬ್ಬರು ಸಿಎಂ ಆಗುತ್ತೇನೆ ಎಂಬ ಕನಸಿನಲ್ಲಿದ್ದಾರೆ ಎಂದು ಲೇವಡಿ ಮಾಡಿದರು.
ಹೈಬಿಪಿ ಹೈ ಶುಗರ್‌ನಿಂದಾಗಿ ಜಾಮೀನು ಪಡೆದು ಡಿ.ಕೆ.ಶಿವಕುಮಾರ್ ಹೊರಗಿದ್ದಾರೆ. ಆರೋಗ್ಯ ಸರಿಹೋದ ಕೂಡಲೇ ಮತ್ತೆ ಜೈಲಿಗೆ ಹೋಗುತ್ತಾರೆ, ಆ ನಿಟ್ಟಿನಲ್ಲಿ ವಕೀಲರ ತಂಡ ದೆಹಲಿಗೆ ಹೋಗಿದೆ. ವಕೀಲರ ತಂಡ ಯಾವ ಫ್ಲೈಟ್‌ನಲ್ಲಿ ಹೋಗಿದ್ದಾರೆ ಎಂಬುದನ್ನು ಡಿಸಿಎಂ ಹೇಳಬೇಕು ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಹೊಸ ಬಾಂಬ್ ಸಿಡಿಸಿದರು.