ಚನ್ನಮ್ಮನ ಕಿತ್ತೂರು;-ಐತಿಹಾಸಿಕ ವೀರ ರಾಣಿ ಕಿತ್ತೂರ ಚನ್ನಮ್ಮನ ನಾಡಿನಲ್ಲಿ ಪರ್ವೇಜ್ ಹವಾಲ್ದಾರ್ ಅವರು ಗ್ರಾಮೀಣ ಯುವಕರ ಸೇನಾ ತರಬೇತಿ ಕೇಂದ್ರ ಸ್ಥಾಪನೆ ಮಾಡಿದ್ದಾರೆ ಇದರಿಂದ ಸೇನೆಗೆ ಸೇರುವ ಅಭ್ಯರ್ಥಿಗಳಿಗೆ ಈ ಕೇಂದ್ರ ವರದಾನವಾಗಿದೆ. ಈ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದು ಒಟ್ಟು 400 ಕ್ಕಿಂತ ಹೆಚ್ಚು ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಭಾರತೀಯ ಸೇನೆಗೆ ಆಯ್ಕೆಯಾಗಿದ್ದಾರೆ. ಈ ಸೇನಾ ತರಬೇತಿ ಕೇಂದ್ರದಲ್ಲಿ ಪ್ರತಿ ಶನಿವಾರ ಉಚಿತ ಡೆಮೋ ರ್ಯಾಲಿ ಹಮ್ಮಿಕೊಳ್ಳಲಾಗತ್ತೆ ಇವತ್ತು ನಡೆದ 22ನೇ ಉಚಿತ ಡೆಮೋ ರ್ಯಾಲಿಯಲ್ಲಿ ಬೇರೆ ಬೇರೆ ಜಿಲ್ಲೆ ಮತ್ತು ತಾಲೂಕಗಳಿಂದ ಸೇನೆಗೆ ಸೇರುವ ಒಟ್ಟು 257 ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಈ ಉಚಿತ ಡೆಮೋ ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಪ್ರಥಮ ಸ್ಥಾನ ಪಡೆದ 62 ಅಭ್ಯರ್ಥಿಗಳಿಗೆ ಗೋಲ್ಡ್ ಮೇಡಲ್ ನೀಡಿ ಗೌರವಿಸಲಾಯಿತು. ಗ್ರಾಮೀಣ ಯುವಕರ ಸೇನಾ ತರಬೇತಿ ಕೇಂದ್ರದ ಸಂಸ್ಥಾಪಕರಾದ ಪರ್ವೇಜ್ ಹವಾಲ್ದಾರ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಿತ್ತೂರ ತಾಲೂಕಿನ ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತರಾದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರದೀಪ ಮೇಲಿನಮನಿ ಅವರಿಗೆ ಸನ್ಮಾನಿಸಲಾಯಿತು.ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕೊಟ್ಟದ ಪದಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರದೀಪ ಮೇಲಿನಮನಿ ಅವರು ಸನ್ಮಾನ ಸ್ವಿಕರಿಸಿ ಮಾತನಾಡಿದರು.ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕೊಟ್ಟದ ಪದಾಧಿಕಾರಿಗಳ ಸಂಘದ ಅಧ್ಯಕ್ಷರು ಶ್ರೀ ಜಗದೀಶ್ ಪೂಜಾರಿ ಮಾತಾನಾಡಿದರು.
ವರದಿ- ಬಸವರಾಜ, ಭಿಮರಾಣಿ.ಜಗದಿಶ ಕಡೋಲಿ