ಬೆಂಗಳೂರು : ಡಿ.ಕೆ.ಸುರೇಶ್ ತಂಗಿ ಎಂದು ಹೇಳಿ ಬಂಗಾರದ ಅಂಗಡಿ ಮಾಲೀಕರಿಗೆ ವಂಚಿಸಿದ ಆರೋಪ ಪ್ರಕರಣ ಕುರಿತಂತೆ ಆರೋಪಿ ಐಶ್ವರ್ಯ ಗೌಡ ಹಾಗೂ ಪತಿ ಹರೀಶ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಡಿಕೆ ಸುರೇಶ್ ತಂಗಿ ಎಂದು ಪರಿಚಯ ಮಾಡಿಕೊಂಡು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಸದ್ಯ ಸಾಕಷ್ಟು ಸದ್ದು ಮಾಡುತ್ತಿದೆ.
ಈ ಸಂಬಂಧ ಐಶ್ವರ್ಯ ಗೌಡ ಹಾಗೂ ಆಕೆಯ ಪತಿಯನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಇಂದು ವಿಚಾರಣೆ ನಡೆಸಿದರು. ತೀವ್ರ ವಿಚಾರಣೆಗೆ ಒಳಪಡಿಸಿದ ನಂತರ ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ನಲ್ಲಿ ಬರೋಬ್ಬರಿ 8.41 ಕೋಟಿ ರೂಪಾಯಿ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ಗೋಲ್ಡ್ ಶಾಪ್ ಮಾಲೀಕರು ದೂರು ನೀಡಿದ್ದರು.