ಬೆಂಗಳೂರು : KPCC ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ಹೊಸ ಅಧ್ಯಕ್ಷರ ನೇಮಕವಾಗಿದೆ. ಹೊಸ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ ಅವರನ್ನು ನೇಮಕ ಮಾಡಲಾಗಿದೆ.
ಐಶ್ವರ್ಯಾ ಮಹಾದೇವ್ ನೇಮಕ ಮಾಡುವ ಪ್ರಸ್ತಾವನೆಯನ್ನು ಎಐಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ.ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಶ್ವರ್ಯಾ ದಿವಂಗತ ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಮಂಚನಹಳ್ಳಿ ಮಹಾದೇವ್ ಪುತ್ರಿಯಾಗಿದ್ದಾರೆ. ಮೂಲತಃ ಮೈಸೂರು ಜಿಲ್ಲೆಯ ಕೆಆರ್ ನಗರದವರಾದ ಐಶ್ವರ್ಯಾ ಮಹಾದೇವ್, ಮಂಚನಹಳ್ಳಿ ಮಹಾದೇವ್ 14 ವರ್ಷ ಹಿಂದೆ ಇಹಲೋಕ ತ್ಯಜಿಸಿದ್ದಾರೆ.
ಅತಿ ಚಿಕ್ಕ ವಯಸ್ಸಿನಲ್ಲಿಯೇ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಹುದ್ದೆಗೇರಿದ್ದ ಐಶ್ವರ್ಯಾ, ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆಯಾಗಿ ಕಾರ್ಯನಿರ್ವಹಿಸಿದ್ದಾರೆ.
ಐಶ್ವರ್ಯ ದೆಹಲಿ ಮಟ್ಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಆಪ್ತ ವಲಯದಲ್ಲಿಯೂ ಸಹ ಗುರುತಿಸಿಕೊಂಡಿದ್ದಾರೆ.




