ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಿಂದಾಗಿ ಸಾರ್ಗೆ ಇಲಾಖೆಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ರಾಜ್ಯ ಸರ್ಕಾರ ನಾಲ್ಕು ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ಹಣ ಬಾಕಿ ಉಳಿಸಿಕೊಂಡಿದೆ.
ಸಾರಿಗೆ ನಿಗಮಗಳು ಸರ್ಕಾರದ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದಾಗಿ ಸಂಕಷ್ಟಕ್ಕೆ ಸಿಲುಕಿವೆ ಎನ್ನಲಾಗಿದೆ.
ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಎನ್.ಡಬ್ಲ್ಯೂ ಕೆ.ಎಸ್.ಆರ್.ಟಿ.ಸಿ ಹಾಗೂ ಕೆ.ಕೆ.ಆರ್.ಟಿ.ಸಿ ನಿಮಗಳು ತೊಂದರೆಗೆ ಸಿಲುಕಿವೆ.
ರಾಜ್ಯ ಸರ್ಕಾರ ನಾಲ್ಕೂ ನಿಗಮಗಳಿಗೂ ಬರೋಬ್ಬರಿ 4,006.47 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಶಕ್ತಿ ಯೋಜನೆ ಸಾರಿಗೆ ಇಲಾಖೆಗಳ ಶಕ್ತಿಯನ್ನು ಕುಂದಿಸುವಂತಾಗಿದೆ.
ಈ ನಡುವೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸಾರಿಗೆ ಇಲಾಖೆ ಸಂಕಷ್ಟಕ್ಕೆ ಸಿಲುಕಿದೆ. ಗ್ಯಾರಂಟಿಗಳಿಂದಾಗಿ ಸಾರಿಗೆ ಇಲಾಖೆಯಲ್ಲಿ ನೌಕರರಿಗೆ ಸಂಬಳವಿಲ್ಲದಂತಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೊಂದಲದಲ್ಲಿದ್ದಾರೆ. ತನು ಎಷ್ಟುದಿನ ಸಿಎಂ ಆಗಿ ಇರುತ್ತೇನೆ ಎಂಬ ಬಗ್ಗೆಯೇ ಗೊಂದಲಗಳು ಅವರಿಗಿದೆ. ರಾಜ್ಯದಲ್ಲಿನ ಸಂಕಷ್ಟ, ಸಮಸ್ಯೆಗಳ ಬಗ್ಗೆ ಪರಿಹಾರ ನೀಡಬೇಕಾದವರೇ ಗೊಂದಲದಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.




