Ad imageAd image

ವೀರಾಪುರ ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಆಲಿಸಾಬ್ ಅಂಡ್ ಮಂಜು ಸಾದುನವರ್

Bharath Vaibhav
ವೀರಾಪುರ ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಆಲಿಸಾಬ್ ಅಂಡ್ ಮಂಜು ಸಾದುನವರ್
WhatsApp Group Join Now
Telegram Group Join Now

ವೀರಾಪುರ:- ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಮಲಪ್ರಭಾ ನದಿ ದಂಡೆಯ ವೀರಾಪುರ ಗ್ರಾಮ ಪಂಚಾಯಿತಿಗೆ ಇಂದು ನೂತನವಾಗಿ ಗ್ರಾಮ ಪಂಚಾಯಿತಿ ಸದಸ್ಯರಾದ ಆಲಿ ಸಾಬ್ ತಳಗಡೆ ಹಾಗೂ ಮಂಜು ಸಾದುನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ಪ್ರಕ್ರಿಯೆ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡುವುದಕ್ಕೆ ಆಗಮಿಸಿದ್ದ ಚುನಾವಣಾ ಅಧಿಕಾರಿಗಳು ಆದ ಕಿತ್ತೂರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಕಿರಣ್ ಘೋರ್ಪಡೆಯವರು ಚುನಾವಣಾ ಪ್ರಕ್ರಿಯೆ ಮುಗಿಸಿ ನಂತರ ನಮ್ಮ ಪತ್ರಿಕಾ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಹೇಳಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಉಪ ಚುನಾವಣೆ ಅಧಿಕಾರಿಗಳು ಆದ ರಾಜೇಶ್ವರಿ ಪಟ್ಟಣ ಶೆಟ್ಟಿ, ಪಿ.ಡಿ.ಓ ಸೂರಮ್ಮ ಪಾಟೀಲ್, ಮಾಜಿ ಗ್ರಾ.ಪಂ ಅಧ್ಯಕ್ಷ ಸಂಗಪ್ಪ ಪಿಶೆಣ್ಣನವರ್, ಮಾಜಿ ಉಪಾಧ್ಯಕ್ಷೆ ಅನು ಬಸನಗೌಡ ಪಾಟೀಲ್ , ಕಾಶವ್ವ ಕಿಲಾರಿ ಸೇರಿದಂತೆ ಗ್ರಾಮದ ಹಿರಿಯರು ಉಪಸ್ಥಿತರಿದ್ದರು, ಪೊಲೀಸ್ ಇಲಾಖೆ ವತಿಯಿಂದ ಬಿಗ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಒಟ್ಟಾರೆ ಇನ್ಮುಂದೆ ವೀರಾಪುರ ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಉಪಾಧ್ಯಕ್ಷರಿಂದ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ನಿರೀಕ್ಷೆ ಮಾಡಲಾಗಿದೆ.

  ವರದಿ:- ಬಸವರಾಜು

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!