ಸೇಡಂ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿ ವೆಂಕಟರೆಡ್ಡಿ ಪಾಟೀಲ ಅವರನ್ನು ಕೇಂದ್ರ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ಆಯ್ಕೆ ಮಾಡಿ ಆದೇಶ ಹೊರಡಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷರು, ಮಹಾಪ್ರಧಾನ ಕಾರ್ಯದರ್ಶಿಗಳು ಹಾಗೂ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ, ರಾಜ್ಯಾಧ್ಯಕ್ಷರಾದ ಶಂಕರ ಬಿದರಿ, ರಾಷ್ಟ್ರೀಯ ಉಪಾಧ್ಯಕ್ಷರಾದ ಸಚ್ಚಿದಾನಂದ ಮೂರ್ತಿ, ನಿಕಟಪೂರ್ವ ರಾಷ್ಟ್ರೀಯ ಯುವ ಅಧ್ಯಕ್ಷರು ಮತ್ತು ರಾಜ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಪಾಟೀಲ್, ರೇಣುಕಾ ಪ್ರಸನ್ನ, ರಾಷ್ಟೀಯ ಮಹಿಳಾ ಘಟಕ ಅಧ್ಯಕ್ಷೆ ವೀಣಾ ಕಾಶಪ್ಪನವರ, ರಾಜ್ಯ ಮಹಿಳಾ ಘಟಕ ಅಧ್ಯಕ್ಷೆ ಮುಕ್ತಾಂಬ ಬಸವರಾಜ, ರಾಜ್ಯ ಯುವ ಘಟಕ ಅಧ್ಯಕ್ಷರಾದ ಮನೋಹರ ಅಬ್ಬಿಗೆರೆ, ವಾಣಿಜ್ಯ ಮತ್ತು ಕೈಗಾರಿಕ ಘಟಕ ಅಧ್ಯಕ್ಷರಾದ ವಿಜಯಕುಮಾರ್ ಪಾಟೀಲ, ಪದಾಧಿಕಾರಿಗಳು ಮೃತ್ಯುಂಜಯ ಹಿರೇಮಠ, ಶಿವಲಿಂಗ ಮಠಪತಿ, ಗುರುರಾಜ ಕೊಂಡನೂರ, ಮತ್ತು ಮಹಾಸಭಾದ ಎಲ್ಲಾ ಪದಾಧಿಕಾರಿಗಳು ಭಾಗಿಯಾಗಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.




