Ad imageAd image

ಈ ವರ್ಷವೇ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲಾಗುವುದು : ಡಿ. ಕೆ ಶಿವಕುಮಾರ್

Bharath Vaibhav
ಈ ವರ್ಷವೇ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲಾಗುವುದು : ಡಿ. ಕೆ ಶಿವಕುಮಾರ್
DKS
WhatsApp Group Join Now
Telegram Group Join Now

ಬೆಂಗಳೂರು:”ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಹಾಗೂ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು  ಪ್ರತಿಕ್ರಿಯೆ ನೀಡಿದರು.

ಹೊಸ ವರ್ಷದ ಸಂಕಲ್ಪದ ಬಗ್ಗೆ ಕೇಳಿದಾಗ, “2026ರ ವರ್ಷ ಶುಭ ಲಗ್ನದಲ್ಲಿ ಆರಂಭವಾಗಿದೆ. 2025ರ ವರ್ಷದಲ್ಲಿ ನಾವು ಉತ್ತಮ ಆಡಳಿತ ನೀಡಿದ್ದೇವೆ. ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಟೆಕ್ ಸಮ್ಮೇಳನ ಮೂಲಕ ನಾವು ಕರ್ನಾಟಕವನ್ನು ಮುನ್ನಡೆಸಿದ್ದೇವೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ” ಎಂದರು.

ನೀರಾವರಿ ಇಲಾಖೆಯಲ್ಲಿ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ಯುಕೆಪಿ, ತುಂಗಾಭದ್ರ ಯೋಜನೆಯಲ್ಲಿ ನಾವು ಕೈಗೊಂಡ ತೀರ್ಮಾನ, ಮೇಕೆದಾಟು ಯೋಜನೆಯಲ್ಲಿ ನ್ಯಾಯಾಲಯದ ತೀರ್ಮಾನ ಇತಿಹಾಸದ ಪುಟ ಸೇರಿವೆ. ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದೆ. ಅವರ ನಂಬಿಕೆ ಉಳಿಸಿಕೊಳ್ಳಲು, ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ” ಎಂದು ಹೇಳಿದರು.

“ನನ್ನ 35 ವರ್ಷಗಳ ರಾಜಕಾರಣದಲ್ಲಿ ಬೆಂಗಳೂರಿಗೆ ಇಷ್ಟು ದೊಡ್ಡ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರಲಿಲ್ಲ. ಪ್ರಧಾನಮಂತ್ರಿಗಳು ಕೂಡ ಬೆಂಗಳೂರಿಗೆ ಬಂದಾಗ ಈ ನಗರವನ್ನು ಕೊಂಡಾಡಿದರು. ಅವರು ನಮ್ಮ ನಗರಕ್ಕೆ ಅನುದಾನ ನೀಡದಿದ್ದರೂ ನಾವು ಈ ನಗರಕ್ಕೆ ಹೊಸ ರೂಪ ನೀಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

“ಗೃಹ ಇಲಾಖೆ ಭದ್ರತೆಯಿಂದ ಬೆಂಗಳೂರಿನಲ್ಲಿ ಜನ 2025ಕ್ಕೆ ಬೀಳ್ಕೊಡುಗೆ ನೀಡಿ, 2026ರ ವರ್ಷವನ್ನು ಸ್ವಾಗತಿಸಿದೆ. ಎಲ್ಲೂ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡ ಗೃಹ ಸಚಿವ ಪರಮೇಶ್ವರ್ ಅವರ ನೇತೃತ್ವದ ಇಡೀ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!