Ad imageAd image

ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ : ವಿಜಯಪುರ ವಿದ್ಯಾರ್ಥಿನಿ ಪೋಸ್ಟ್ 

Bharath Vaibhav
ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ : ವಿಜಯಪುರ ವಿದ್ಯಾರ್ಥಿನಿ ಪೋಸ್ಟ್ 
WhatsApp Group Join Now
Telegram Group Join Now

ವಿಜಯಪುರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ಇದೀಗ ಆಪರೇಷನ್‌ ಸಿಂಧೂರ್‌ ಮೂಲಕ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಭಯೋತ್ಪಾದನೆಯನ್ನು ಪೋಷಿಸುತ್ತಿದ್ದರೂ ತನ್ನ ತಪ್ಪನ್ನು ಒಪ್ಪಿಕೊಳ್ಳದ ಪಾಕ್‌ ಮತ್ತೆ ಮತ್ತೆ ಬಾಲ ಬಿಚ್ಚಿ ಭಾರತವನ್ನು ಕೆಣಕುತ್ತಿದೆ.

ಇತ್ತ ಕರ್ನಾಟಕದಲ್ಲಿ ಕೆಲ ಕಿಡಿಗೇಡಿಗಳು ಇದೇ ಸಂದರ್ಭ ತಮ್ಮ ಪಾಕ್‌ ಪ್ರೇಮವನ್ನು ವ್ಯಕ್ತಪಡಿಸುತ್ತಿದ್ದಾರೆ. ಪಾಕಿಸ್ತಾನದ ಪರ ಪೋಸ್ಟ್‌ ಹಾಕಿದ ವಿಜಯಪುರದ ವಿದ್ಯಾರ್ಥಿನಿಯೊಬ್ಬಳ ವಿರುದ್ಧ ಇದೀಗ ಕೇಸ್‌ ದಾಖಲಾಗಿದೆ.

ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ತಷಾವುದ್ದ ಫಾರೂಖಿ ಶೇಖ್ ಎಂಬ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್​​ ಹಂಚಿಕೊಂಡಿದ್ದಾಳೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ತಷಾವುದ್ದ ಫಾರೂಖಿ ಶೇಖ್ ತನ್ನ ‘@hoodyyyyyyy’ ಎಂಬ ಖಾತೆಯಲ್ಲಿ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾಳೆ. ಅದರಲ್ಲಿ ಬರೆದಿರುವ ಆಕೆ, ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ.

ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ ಅಮೀನ್#sos ಎಂದು ಬರೆದುಕೊಂಡಿದ್ದಾಳೆ.

ವಿದ್ಯಾರ್ಥಿನಿಯ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಕೆರಳಿದ ಹಿಂದೂ ಪರ ಸಂಘಟನೆಗಳು ಆಕೆಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಬಳಿಕ ಪಿಎಸ್‌ಐ ವಿನೋದ ದೊಡಮನಿಯಿಂದ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ದೂರು ದಾಖಲಾಗುತ್ತಿದ್ದಂತೆ ವಿದ್ಯಾರ್ಥಿನಿ ಯೂ ಟರ್ನ್ ಹೊಡೆದಿದ್ದಾಳೆ. ನನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿನ ನನ್ನ ಕಾಮೆಂಟ್‌ಗೆ ಸಂಬಂಧಿಸಿದೆ ಅದು ಕೆಲವರನ್ನು ನೋಯಿಸಿದೆ. ಮನನೊಂದಿರುವ ಎಲ್ಲರಿಗೂ ನನ್ನ ಹೃದಯದಿಂದ ಕ್ಷಮೆಯಾಚಿಸುತ್ತೇನೆ.

ಭಾರತೀಯಳಾದ ನಾನು ನನ್ನ ರಾಷ್ಟ್ರವನ್ನು ಪ್ರೀತಿಸುತ್ತೇನೆ. ಇದು ನನ್ನ ತಾಯ್ನಾಡು. ಭಾರತದಲ್ಲಿ ಹುಟ್ಟಿ ಬೆಳೆದದ್ದು, ನಾನು ಕಮೆಂಟ್ ಮಾಡಿದ್ದು ಮೂರ್ಖತನದ ಕೃತ್ಯವಾಗಿದೆ ಮತ್ತೊಮ್ಮೆ! ನಿಜವಾಗಿಯೂ ಎಲ್ಲರಿಗೂ ಕ್ಷಮೆಯಾಚಿಸುವೆ. ಮುಂದೆ ನಾನು ಎಂದಿಗೂ ಈ ರೀತಿಯ ತಪ್ಪನ್ನು ಮಾಡುವುದಿಲ್ಲ ಎಂದು ಖಚಿತಪಡಿಸಿತ್ತೇನೆ. ಜೈ ಹಿಂದ್ ಎಂದು ಬರೆದಿದ್ದಾಳೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!