ಸೇಡಂ: ತಾಲೂಕಿನ ಮೆದಕ್ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸಿಲಾರಕೋಟ್ ಗ್ರಾಮದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಂಜೂರಾದ ೪೦ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಡಾ. ಮಧುಸೂಧನ್ ರೆಡ್ಡಿ ಪಾಟೀಲ್ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದರು.
ತದನಂತರ ಮೇದಕ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿನೀಡಿ ಆಹಾರ ಧಾನ್ಯಗಳ ಪರಿಶೀಲನೆ ಮತ್ತು ಮಕ್ಕಳೊಂದಿಗೆ ಶಿಕ್ಷಣದ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳಾದ ರಾಮಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹದೇವಮ್ಮ ಗಂಡ ಮಾಣಿಕಪ್ಪ, ಉಪಾಧ್ಯಕ್ಷರಾದ ಡಾ. ಮಧುಸೂಧನ್ ರೆಡ್ಡಿ ಪಾಟೀಲ್, ಸದಸ್ಯರಾದ ಭೀಮರೆಡ್ಡಿ, ನಾಗೇಂದ್ರಪ್ಪ ಸಾಹುಕಾರ್ ಸೇರಿದಂತೆ ಅರ್ಹ ಫಲಾನುಭವಿಗಳು ಮತ್ತು ಗ್ರಾಮಸ್ಥರು ಇದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




