Ad imageAd image

ಆಗಸ್ಟ್ 10ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ 

Bharath Vaibhav
ಆಗಸ್ಟ್ 10ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ 
RATION CARD
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೆ ಪಡಿತರ ಚೀಟಿ ( ಬಿಪಿಎಲ್) ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಿದ್ದು, ಸರ್ಕಾರದ ವೆಬ್ ಸೈಟ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ ಮಾಡಬಹುದಾಗಿದೆ.

ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅವಕಾಶ ಕಲ್ಪಿಸಿದ್ದು, ಆಗಸ್ಟ್ 10ರವರೆಗೆ ಅವಕಾಶ ರೇಷನ್ ಕಾರ್ಡ್ ಅಪ್ ಡೇಟ್ ಮಾಡಲು ಏನೆಲ್ಲಾ ದಾಖಲೆಗಳು ಬೇಕು..?

ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ. ವಿದ್ಯುತ್ ಬಿಲ್ ದಾಖಲೆ ನೀಡಬೇಕು.

ಪಡಿತರ ಚೀಟಿ ತಿದ್ದುಪಡಿ ಮಾಡಿರುವವರು ಇತ್ತೀಚಿನ ವಿದ್ಯುತ್ ಬಿಲ್ಲಿನಲ್ಲಿ ನಮೂದಿಸಿರುವ ವಿದ್ಯುತ್ ಮೀಟರ್ ಆರ್‌ಆರ್ ಸಂಖ್ಯೆ ಮತ್ತು ಲೊಕೇಷನ್ ಕೋಡ್ ನೀಡುವುದು ಕಡ್ಡಾಯ ಮಾಡಲಾಗಿದೆ.

ವಿಳಾಸ ಬದಲಾವಣೆ, ಕುಟುಂಬಕ್ಕೆ ಸೇರಿದವರ ಹೆಸರು ತೆಗೆಯುವುದು.ಫೋಟೋ ಮತ್ತು ಬಯೋಮೆಟ್ರಿಲ್ ಅಪ್ಡೇಟ್, ಕುಟುಂಬ ಸದಸ್ಯರ ಹೆಸರು ತಿದ್ದುಪಡಿ. ಮನೆ ಯಜಮಾನರ ಬದಲಾವಣೆ, ಹೊಸ ಸದಸ್ಯರ ಸೇರ್ಪಡೆ ಮಾಡಬಹುದು

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!