ಬೆಂಗಳೂರು : ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಡಿಸೆಂಬರ್ 31 ರವರೆಗೆ ಆಹಾರ ಇಲಾಖೆ ಅವಕಾಶ ನೀಡಿತ್ತು, ಇದೀಗ ಜನವರಿ 31 ರವರೆಗೆ ವಿಸ್ತರಿಸಲಾಗಿದೆ. ರೇಷನ್ ಕಾರ್ಡ್ ಸೇರ್ಪಡೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಸಂಬಂಧ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಅಗತ್ಯ ದಾಖಲೆಯೊಂದಿಗೆ ತೆರಳಿ ಆನ್ಲೈನ್ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
ಪಡಿತರ ಚೀಟಿ ತಿದ್ದುಪಡಿ ಮಾಡಿರುವವರು ಇತ್ತೀಚಿನ ವಿದ್ಯುತ್ ಬಿಲ್ಲಿನಲ್ಲಿ ನಮೂದಿಸಿರುವ ವಿದ್ಯುತ್ ಮೀಟರ್ ಆರ್‌ಆರ್ ಸಂಖ್ಯೆ ಮತ್ತು ಲೊಕೇಷನ್ ಕೋಡ್ ನೀಡುವುದು ಕಡ್ಡಾಯ ಮಾಡಲಾಗಿದೆ.