ಮುದಗಲ್ಲ: ಪುರಸಭೆ ವತಿಯಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಜನ್ಮದಿನವನ್ನು ಬುಧವಾರ ಆಚರಿಸಲಾಯಿತು.
ಮೌನೇಶ ಬಡಿಗೇರ್ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಹೂ ಮಾಲೆ ಹಾಕಿದರು ಪೂಜೆ ಸಲ್ಲಿಸಿದರು ಮಾತನಾಡಿ, ಅಮರ ಶಿಲ್ಪಿ ಜಕಣಾಚಾರಿಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂನಮ್ಮನ್ನು ಬೆರಗು ಗೊಳಿಸುತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಅವರು ಮಾತನಾಡಿದರು ಜಗತ್ತಿನ ಅದ್ಭುತ ಶಿಲ್ಪಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಬೆಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಮಾಡುವ ಕೆಸದ ಬಗ್ಗೆ ತಿಳಿವಳಿಕೆ, ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ. ಸಾಧಕರನ್ನು ಸ್ಮರಣೆ ಮಾಡಿದರಷ್ಟೇ ಸಾಲದು. ಅವರ ಗುಣ ಮತ್ತುಬೆಳೆದು ಬಂದ ಪರಿಶ್ರಮದ ಘಟನೆಗಳನ್ನ ತಿಳಿದು ಜೀವನದಲ್ಲಿ ಅಳವಡಿಸಿಕೊಳ್ಳುದು ಅತೀ ಮುಖ್ಯ ಎಂದರು.
ಈ ಸಂದರ್ಭದಲ್ಲಿ ತಮಣ್ಣ ಗುತ್ತಿಗೆದಾರ, ಬಾಬು ಉಪ್ಪಾರ,ಕರಿಯಪ್ಪ ಯಾದವ್,
ಮೌನೇಶ್ ಕುಮಾರ್, ಕಾಳಪ್ಪ ಬಡಿಗೇರ್, ಉದಯ್ ಕುಮಾರ್, ಶ್ರೀಧರ್ ಪತ್ತಾರ್, ಕಾಂತ್ ಕುಮಾರ್ ಪತ್ತಾರ್, ನೀಲಪ್ಪ ಕುಮಾರ್ , ಸುರೇಶ್ ಪತ್ತಾರ , ಮಲ್ಲಪ್ಪ ಮಾಟೂರ, ನಾಗರಾಜ ತಳವಾರ, ಬಸವರಾಜ ಬಂಕದಮನಿ, ಹಾಗೂ ಪುರಸಭೆ ಯ ಸಿಬ್ಬಂದಿಗಳು ಉಪಸ್ಥಿತರಿದ್ದರು..
ವರದಿ: ಮಂಜುನಾಥ ಕುಂಬಾರ