Ad imageAd image

ಬೇಸಿಗೆ ಶಿಬಿರ ಮಕ್ಕಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸುತ್ತಿದೆ : ಅಮರೇಶ್ ನಾಯಕ್ 

Bharath Vaibhav
ಬೇಸಿಗೆ ಶಿಬಿರ ಮಕ್ಕಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸುತ್ತಿದೆ : ಅಮರೇಶ್ ನಾಯಕ್ 
WhatsApp Group Join Now
Telegram Group Join Now

ಬಾಗಲಕೋಟೆ : ಆರಾಧ್ಯ ಸಂಸ್ಥೆ ತಮ್ಮ ಸ್ವಂತ ಹಣದಿಂದ ಬೇಸಿಗೆ ಶಿಬಿರ ನಡೆಸುತ್ತಿರುವುದು ಖುಷಿ ವಿಚಾರ, ಇದ್ದನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಮರೇಶ್ ನಾಯಕ ತಿಳಿಸಿದರು.

ಹುನಗುಂದ ತಾಲೂಕಿನ ಗಂಜಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದ ಆರಾಧ್ಯ ಸಂಸ್ಥೆಯ ಗ್ರಾಮೀಣ ಬೇಸಿಗೆ ಶಿಬಿರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬೇಸಿಗೆ ಮಕ್ಕಳು ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಲು ಅನುಕೂಲವಾಗಲಿದೆ. ಆರಾಧ್ಯ ಸಂಸ್ಥೆ ಸ್ವಂತ ಹಣದಿಂದ ಬೇಸಿಗೆ ಶಿಬಿರ ನಡೆಸುತ್ತಿರುವುದು ಖುಷಿ ವಿಚಾರ, ಇದ್ದನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಬಳಿಕ ಮಾತನಾಡಿದ ಕಾರ್ಯನಿರ್ವಾಹಕ ಅಧಿಕಾರಿ ತಾರಾ ಎನ್, 15 ದಿನಗಳ ಕಾಲ ಜರುಗಿದ ಬೇಸಿಗೆ ಶಿಬಿರವೂ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ. ಮಕ್ಕಳ ಮುಂದಿನ ಕಲಿಕೆಗೆ ಪೂರಕವಾಗಲಿದೆ ಎಂದರು.

ಇನ್ನು 15 ದಿನಗಳ ಕಾಲ ಜರುಗಿದ ಶಿಬಿರದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಲಾಯಿತು. ಈ ಶಿಬಿರದಲ್ಲಿ ಭಾಗಿಯಾದ ಮಕ್ಕಳಿಗೆ ಪ್ರಶಂಸನಾ ಪತ್ರವನ್ನು ಉಪಕಾರ್ಯದಶಿ೯ಗಳು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ವಿತರಿಸಿದರು.

ಬಳಿಕ ಉಪಕಾರ್ಯದಶಿ೯ಗಳಿಗೆ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆರಾಧನಾ ಸಂಸ್ಥೆಯಿಂದ ಸನ್ಮಾನಿಸಲಾಯಿತು. ಬಳಿಕ ಉಪಕಾರ್ಯದಶಿ೯ಗಳು ಶಾಲಾ ಆವರಣದಲ್ಲಿ ಸಸಿ ನೆಟ್ಟು ನೀರುಣಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಎಸ್ ಅದಾಲಟ್ಟಿ , ಐಇಸಿ ಸಂಯೋಜಕ ಬಸವರಾಜ ಕೊಪ್ಪದ , ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣಾಜಿ ಪವಾರ್ , ಆರಾಧ್ಯ ಸಂಸ್ಥೆಯ ನಿರ್ದೇಶಕ ವಿಜಯಮಹಾಂತೇಶ್ ಕೆ. ಮಲಗಿಹಾಳ, ಶಾಲಾ ಮುಖ್ಯ ಶಿಕ್ಷಕರು, ಡಾಟಾ ಎಂಟ್ರಿ ಆಪರೇಟರ್ ಯಮನಪ್ಪ ಮ್ಯಾಗೇರಿ , ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಅತಿಥಿ ಶಿಕ್ಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!