ಸೇಡಂ: ಇತ್ತೀಚೆಗೆ ಚಿತ್ತಾಪುರ ಮತಕ್ಷೇತ್ರದ ಶಹಾಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದು ಸೇಡಂ ತಾಲೂಕಿನ ಹಡಪದ ಅಪ್ಪಣ್ಣ ಸಮಾಜದ ಪ್ರಧಾನ ಕಾರ್ಯದರ್ಶಿಯಾದ ಅಂಬರೀಶ್ ಹಡಪದ ಉಡಗಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಅಂಬಿಗರ ಚೌಡಯ್ಯನವರು 12 ನೇ ಶತಮಾನದಲ್ಲಿ ವಚನ ಕ್ರಾಂತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು ಸಾಮಾಜಿಕ ಪ್ರಜ್ಞೆಯನ್ನು ಜಾಗೃತಗೊಳಿಸಿದವರು ಬಸವಣ್ಣನ ಅನುಯಾಯಿಗಳಾದ ಅವರು ಮೂಡನಂಬಿಕೆಗಳ ವಿರುದ್ಧ ಅರಿವು ಮೂಡಿಸಿದ ಮಹಾಜ್ಞಾನಿ ಸಮಾಜದಲ್ಲಿನ ಮೌಢ್ಯತೆ ಅಂಧಕಾರವನ್ನು ಅಳಿಸಿ ಚಿಂತನೆಯ ಬೆಳಕು ಹೊತ್ತಿಸುವಲ್ಲಿ ಅಂಬಿಗರ ಚೌಡಯ್ಯನವರ ಪಾತ್ರ ಬಹುದೊಡ್ಡದಾಗಿದೆ.
ಆದರೆ ವಿಕೃತ ಮನಸ್ಥಿತಿಯ ಕೆಲವರು ಮಹಾನ್ ವಚನಕಾರರ ಪ್ರತಿಮೆಯನ್ನು ವಿರೂಪಗೊಳಿಸಿ ಅಪಮಾನ ಮಾಡಿದ್ದಾರೆ ಇದನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ವ್ಯಕ್ತಪಡಿಸಿದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




