ಸದಲಗಾ :ಪಟ್ಟಣದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಣೆ ಈ ಸಂದರ್ಭದಲ್ಲಿ ಭಾಷಣ ಸ್ಪರ್ಧೆ ನಿಬಂಧ ಸ್ಪರ್ಧೆ ರಂಗೋಲಿ ಸ್ಪರ್ಧೆಗಳು ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ನಂತರ ಸದಲಗ ಪಟ್ಟಣದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಮೂರ್ತಿಯ ಮೆರವಣಿಗೆ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ನಗರದ ಮಹಿಳೆಯರು ಹಾಗೂ ಪುರುಷರು ಬೌದ್ಧ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು ಹಾಗೂ ಪಟ್ಟಣದ ನಾಗರಿಕರು ಹಿರಿಯ ಮುಖಂಡರು ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಮಾಧ್ಯಮ ಮತ್ತು ಪತ್ರಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತಿಯಲ್ಲಿ ಈ ವರ್ಷದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಅತಿ ವಿಜೃಂಭಣೆಯಿಂದ ನಡೆಸಲಾಯಿತು.
ವರದಿ: ರಾಜು ಮುಂಡೆ




