Join The Telegram | Join The WhatsApp |
ರಾಯಚೂರು : ದೇಶದಲ್ಲಿ ಹಿಂದೂಗಳ ಆರಾಧ್ಯ ದೈವವಾದ ಶ್ರೀರಾಮನ ಭವ್ಯವಾದ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ.
ಇದರ ಬೆನ್ನಲ್ಲಿಯೇ ಶ್ರೀ ಗುರು ರಾಘವೇಂದ್ರರ ಸನ್ನಿಧಿಯಾದ ಮಂತ್ರಾಲಯದಲ್ಲಿ 108 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ನಿರ್ಮಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಡಿಗಲ್ಲು ಹಾಕಿ ಚಾಲನೆ ನೀಡಿದ್ದಾರೆ.
ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಪ್ರತಿಮೆಗೆ ಅಡಿಗಲ್ಲು ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಇನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು, ವರ್ಚುವಲ್ ಮೂಲಕ ಅಡಿಗಲ್ಲು ಹಾಕಿದರು. ಮಂತ್ರಾಲಯದಲ್ಲಿ ನಿರ್ಮಾಣವಾಗಲಿರುವ 108 ಅಡಿ ಎತ್ತರದ ಶ್ರೀರಾಮನ ಪ್ರತಿಮೆಗೆ ಭೂಮಿ ಪೂಜೆಯನ್ನು ಅದ್ಧೂರಿಯಾಗಿ ನೆರವೇರಿಸಲಾಯಿತು.
ಇದೇ ವೇಳೆ ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಭೌತಿಕವಾಗಿ ಭೂಮಿ ಪೂಜೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆಂಧ್ರ ಪ್ರದೇಶ ರಾಜ್ಯದ ಹಲವು ಸಚಿವರುಗಳು ಹಾಗೂ ಗಣ್ಯರು ಭಾಗಿಯಾಗಿದ್ದರು. ಅಪಾರ ಭಕ್ತರ ಸಮ್ಮುಖದಲ್ಲಿ ನಡೆದ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿತು.
Join The Telegram | Join The WhatsApp |