Join The Telegram | Join The WhatsApp |
ಹುಬ್ಬಳ್ಳಿ : ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ, ಇಂದು ಮುಂಬೈ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋಗೆ ತಯಾರಿಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ರಾತ್ರಿಯೇ ಹುಬ್ಬಳ್ಳಿಗೆ ಆಗಮಿಸಿದ್ದು, ಇಂದು ಬೆಳಗ್ಗೆ ಕುಂದಗೋಳದಲ್ಲಿ ಬೃಹತ್ ರೋಡ್ ಶೋ ನಡೆಸಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಲಿದ್ದಾರೆ.
ಬೆಳಿಗ್ಗೆ ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುಮಾರು 12 ಗಂಟೆಗೆ ಧಾರವಾಡ ಕಾರ್ಯಕ್ರಮಕ್ಕೆ ಬಂದು ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಕ್ಯಾಂಪಸ್ ಭೂಮಿ ಪೂಜೆ ನೆರವೇರಿಸುವರು. ನಂತರ ಕೃವಿವಿಯ ರೈತ ಜ್ಞಾನ ಅಭಿವೃದ್ದಿ ಸಭಾಂಗಣದಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ ಊಟದ ನಂತರ ಕೃವಿವಿಯಿಂದ ಕುಂದಗೋಳ ಕಾರ್ಯಕ್ರಮಕ್ಕೆ ತೆರಳುವರು. ಅಲ್ಲಿಂದ ನೇರವಾಗಿ ಬೆಳಗಾವಿ ಜಿಲ್ಲಾ ಪ್ರವಾಸ ಮಾಡುವರು.
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಸಂಜೆ ಬೆಳಗಾವಿಯ ಹೋಟೆಲ್ ನಲ್ಲಿ ಹಿರಿಯ ನಾಯಕರ ಜೊತೆಗೆ ಎರಡು ಸಭೆ ನಿಗದಿಯಾಗಿದೆ.
Join The Telegram | Join The WhatsApp |