Join The Telegram | Join The WhatsApp |
ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆ ಸಿದ್ಧತೆಗಾಗಿ ರಾಜ್ಯಕ್ಕೆ ಜನವರಿ 25ರಂದು ಬೆಂಗಳೂರಿಗೆ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಂದಿನ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ಪಕ್ಷ ಬಲಪಡಿಸುವುದರ ಬಗ್ಗೆ ಚರ್ಚೆ ನಡೆಯಬಹುದು. ಈ ಬಾರಿ ಬೆಂಗಳೂರಿನಲ್ಲಿ ಕೆಲವು ಅಭಿವೃದ್ಧಿ ಯೋಜನೆಗಳಿಗೆ ಅಮಿತ್ ಶಾ ಚಾಲನೆ ಕೊಡಲಿದ್ದಾರೆ.
ರಾಜ್ಯ ಬಿಜೆಪಿಯ ಚುನಾವಣಾ ತಯಾರಿಯ ಅವಲೋಕನ ಮಾಡಲಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಜತೆ ಮಹತ್ವದ ಸಭೆಗಳನ್ನೂ ನಡೆಸಲು ಅಮಿತ್ ಶಾ ತೀರ್ಮಾನಿಸಿದ್ದಾರೆ. ಕೆಲವರು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರುವ ಸಾಧ್ಯತೆಯೂ ಇರಬಹುದು ಎಂಬ ಮಾಹಿತಿ ಲಭ್ಯವಾಗಿದೆ.
Join The Telegram | Join The WhatsApp |