ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬಳು ನೇಣಿಗೆ ಶರಣಾದ ಆಘಾತಕಾರಿ ಘಟನೆ ನಡೆದಿದೆ. ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪಕ್ಕದ ಮನೆಯ ಸ್ನೇಹಿತೆ ಜೊತೆ ಸ್ಪಂದನಾ ನಿತ್ಯ ಸೈಕಲ್ ಆಡುತ್ತಿದ್ದಳು. ಆದರೆ ಇಂದು ಆಕೆ ಸೈಕಲ್ ಕೊಟ್ಟಿಲ್ಲವೆಂದು ನೊಂದ ಬಾಲಕಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎನ್ನಲಾಗಿದೆ.ಈ ಸಂಬಂಧ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.