ಹುಬ್ಬಳ್ಳಿ: ಹುಬ್ಬಳ್ಳಿಯ 4 ಅಂತಸ್ತಿನ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಸುಖಸಾಗರ ಕಟ್ಟಡದಲ್ಲಿ ಘಟನೆ ನಡೆದಿದೆ.
ಮೊದಲ ಹಾಗೂ ಎರಡನೇ ಮಹಡಿಯಲ್ಲಿದ್ದ ಬಟ್ಟೆ ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬೆಂಕಿಯಿಂದ ಅಪಾರ ಮೌಲ್ಯದ ಚಪ್ಪಲಿ, ಬಟ್ಟೆಗಳು ಸುಟ್ಟು ಕರಕಲಾಗಿವೆ.
ಬೆಂಕಿ ಹೊತ್ತಿಕೊಂಡ ಕಟ್ಟಡದಲ್ಲಿ ಸಿಲುಕಿಕೊಂಡಿದ್ದ ವೃದ್ಧ ದಂಪತಿಯನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದ ವೃದ್ಧ ದಂಪತಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ರಾತ್ರಿ 12.30ರ ಸುಮಾರಿಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಕಟ್ಟಡಕ್ಕೆ ಬೆಂಕಿಯ ಕೆನ್ನಾಲಿಗೆ ಹರಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹುಬ್ಬಳ್ಳಿಯ ಶಹರಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




