Ad imageAd image
- Advertisement -  - Advertisement -  - Advertisement - 

ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆರೋಪ : ಆರೋಗ್ಯ ಇಲಾಖೆಯಿಂದ ಮಹತ್ವದ ಪ್ರಕಟಣೆ 

Bharath Vaibhav
ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆರೋಪ : ಆರೋಗ್ಯ ಇಲಾಖೆಯಿಂದ ಮಹತ್ವದ ಪ್ರಕಟಣೆ 
WhatsApp Group Join Now
Telegram Group Join Now

ಬೆಂಗಳೂರು: ಸಿಲಿಕಾನ್ ಸಿಟಿಗೆ ರೈಲಿನ ಮೂಲಕ ನಾಯಿಯ ಮಾಂಸ ಸರಬರಾಜು ಮಾಡಲಾಗುತ್ತಿದೆ. ಇದನ್ನೇ ಬಿರಿಯಾನಿ ಮಾಡಿ ಗ್ರಾಹಕರಿಗೆ ತಿನ್ನಿಸಲಾಗುತ್ತಿದೆ ಅನ್ನೋ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಪಷ್ಟನೆ ನೀಡಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಇಲಾಖೆಯು, ದಿನಾಂಕ:26.07.2024 ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ ಎಂದಿದೆ.

ಈ ಕುರಿತಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಈ ಕೆಳಕಂಡಂತೆ ಕ್ರಮಗಳನ್ನು ವಹಿಸಲಾಗಿರುತ್ತದೆ ಎಂಬುದಾಗಿ ಹೇಳಿದೆ.

ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೋಲಿಸ್ ಇಲಾಖೆ ಹಾಗೂ ಆಹಾರ ಸುರಕ್ಷತ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿರುತ್ತಾರೆ ಅಂತ ಹೇಳಿದೆ.

ಸಂಬಂಧಿಸಿದಂತೆ, ವ್ಯಾಪ್ತಿಯ ಅಂಕಿತಾಧಿಕಾರಿಗಳು ಮತ್ತು ಆಹಾರ ಸುರಕ್ಷತಾಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಪರಿಶೀಲನ ಸಂಧರ್ಭದಲ್ಲಿ ರಾಜಸ್ಥಾನದಿಂದ ಬಂದ ರೈಲಿನ ಮೂಲಕ ಸ್ವೀಕೃತವಾದ ಪಾರ್ಸೆಲ್‌ಗಳನ್ನು ನಿಲ್ದಾಣದ ಹೊರ ಆವರಣದಲ್ಲಿ ಸಾಗಾಣಿಕೆ ವಾಹನದಲ್ಲಿರಿಸಿರುವುದು ಕಂಡುಬಂದಿರುತ್ತದೆ ಎಂದು ಹೇಳಿದೆ.

ಒಟ್ಟು 90 ಸಂಖ್ಯೆಯ ಪಾರ್ಸೆಲ್‌ಗಳಿದ್ದು, ಅವುಗಳನ್ನು ಪರಿಶೀಲಿಸಲಾಗಿ ಪ್ರಾಣಿಯ ಯಾವ ಪ್ರಾಣಿಯ ಮಾಂಸವೆಂದು ಮಾಂಸವಿರುವುದು ಕಂಡುಬಂದಿರುತ್ತದೆ. ಖಚಿತಪಡಿಸಿಕೊಳ್ಳಲು ಮಾಂಸದ ಮಾದರಿಯನ್ನು ಸಂಗ್ರಹಿಸಿ, ಆಹಾರ ಪುಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಸಲ್ಲಿಸಲಾಗಿರುತ್ತದೆ. ವಿಶ್ಲೇಷಣಾ ಫಲಿತಾಂಶದ ಆಧಾರದ ಮೇಲೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದಿದೆ.

ಪಾರ್ಸೆಲ್‌ಗಳನ್ನು ಕಳುಹಿಸಿದವರ ಮತ್ತು ಸ್ವೀಕರಿಸಿದವರ ಎಫ್‌ಎಸ್‌ಎಸ್‌ಐ ಪರವಾನಗೆ ಸೇರಿಂದತೆ ವಿವರವಾದ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಲೋಪದೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮಜರುಗಿಸಲಾಗುವುದು ಎಂಬುದಾಗಿ ತಿಳಿಸಿದೆ.

 

WhatsApp Group Join Now
Telegram Group Join Now
Share This Article
error: Content is protected !!