Ad imageAd image

ಪರಿಶಿಷ್ಟ ಸಮುದಾಯದ ಮಹಿಳೆಯರಿಗೆ 5 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ 

Bharath Vaibhav
ಪರಿಶಿಷ್ಟ ಸಮುದಾಯದ ಮಹಿಳೆಯರಿಗೆ 5 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ 
WhatsApp Group Join Now
Telegram Group Join Now

ಬೆಂಗಳೂರು: ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯವನ್ನು ಆಯಾ ನಿಗಮಗಳ ಅಡಿಯಲ್ಲಿ 5 ಲಕ್ಷದವರೆಗೆ ಸಹಾಯಧನ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯರನ್ನು ಪ್ರೋತ್ಸಾಹಿಸಲು ಮತ್ತು ಆರ್ಥಿಕವಾಗಿ ಅವರನ್ನು ಸಬಲೀಕರಣಗೊಳಿಸಲು ಸಮಾಜ ಕಲ್ಯಾಣ ಇಲಾಖೆಯ ನಿಗಮಗಳ ಅಡಿಯಲ್ಲಿ ಜಾರಿಗೆ ತರಲಾದ ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಸಮುದಾಯದ ಮಹಿಳಾ ಸ್ವಸಹಾಯ ಸಂಘಗಳ(ಕನಿಷ್ಠ 10 ಸದಸ್ಯರು) ವಿವಿಧ ಉದ್ದೇಶದ ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ನೀಡಲಾಗುವುದು.

ಘಟಕ ವೆಚ್ಚ: ರೂ. 5.00 ಲಕ್ಷ ಸಹಾಯಧನ: ರೂ. 2.50 ಲಕ್ಷ ಸಾಲ: ರೂ. 2.50 ಲಕ್ಷ (ಶೇ. 4 ರಷ್ಟು ಬಡ್ಡಿ ದರ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10.09.2025.

ಈ ಕೆಳಗಿ‌ನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು: https://sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!