Ad imageAd image

ಕೆಲಸಕ್ಕೆ ಹಾಜರಾಗುವ ದಿನವೇ ಭೀಕರ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಸಾವು

Bharath Vaibhav
ಕೆಲಸಕ್ಕೆ ಹಾಜರಾಗುವ ದಿನವೇ ಭೀಕರ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಸಾವು
WhatsApp Group Join Now
Telegram Group Join Now

ಹಾಸನ: ಟಯರ್ ಸ್ಫೋಟಗೊಂಡಿದ್ದರಿಂದ ಪೊಲೀಸ್ ಜೀಪ್ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಮಧ್ಯಪ್ರದೇಶ ಮೂಲದ ಹರ್ಷಬರ್ಧನ್ ಎಂದು ಗುರುತಿಸಲಾಗಿದೆ.

ಮೈಸೂರಿನ ಕರ್ನಾಟಕ ಪೊಲೀಸ್‌ ಅಕಾಡೆಮಿಯಿಂದ (ಕೆಪಿಎ) ಹಾಸನ ಜಿಲ್ಲಾ ಎಸ್‌ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಹರ್ಷವರ್ಧನ್ ಭಾನುವಾರ ಸಂಜೆ ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಅಪಘಾತ ಸಂಭವಿಸಿದೆ.

ಹರ್ಷಬರ್ಧನ್ ಅವರು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿ‌ದ್ದರು. ಹೊಳೆನರಸೀಪುರ ಕಡೆಯಿಂದ ಜೀಪ್‌ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದಾಗ, ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಟಯರ್ ಸ್ಫೋಟಗೊಂಡು, ಜೀಪ್‌ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ.

ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಅಧಿಕಾರಿ ಮತ್ತು ಚಾಲಕನನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!