Ad imageAd image

ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ವೃದ್ಧ ಹೃದಯಾಘಾತದಿಂದ ನಿಧನ 

Bharath Vaibhav
ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ವೃದ್ಧ ಹೃದಯಾಘಾತದಿಂದ ನಿಧನ 
WhatsApp Group Join Now
Telegram Group Join Now

ಬೆಳಗಾವಿ : ರಾಜ್ಯಾದ್ಯಂತ ವರುಣ ಅಬ್ಬರಿಸಿತ್ತಿದ್ದು ಇದೀಗ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಸುಮಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಬೆಳಗಾವಿಯಲ್ಲಿ ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಮನೆಯ ಮಾಲಿಕ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಮಾಲೀಕ ಸಾವನ್ನಾಪ್ಪಿದ್ದರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ನಿನ್ನೆ ಸಂಜೆ ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ದಶರಥ ಬಂಡಿ (80) ಹೃದಯಾಘಾತದಿಂದ ಸಾವನಪ್ಪಿದ್ದಾರೆ.

ಈ ವೇಳೆ ಮನೆಯ ಸದಸ್ಯರೆಲ್ಲರೂ ಅವರ ಅಂತ್ಯ ಸಂಸ್ಕಾರ ಮುಗಿಸಿ ಬರುವಷ್ಟರಲ್ಲಿ ಮನೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ರಾತ್ರೋರಾತ್ರಿ ಉಟ್ಟ ಬಟ್ಟೆಯಲ್ಲಿ ಮನೆಯಿಂದ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಆಗಿದ್ದೇವೆ ಎಂದು ಗೋಕಾಕ್ ನಗರದ ಉಪ್ಪಾರ ಗಲ್ಲಿಯ ನಿವಾಸಿ ಲಕ್ಷ್ಮಿ ಇದೀಗ ಅಳಲು ತೋಡಿಕೊಂಡಿದ್ದಾರೆ. ಮಕ್ಕಳು ನಾಯಿಮರಿಗಳ ಜೊತೆ ಕಾಳಜಿ ಕೇಂದ್ರಕ್ಕೆ ಇದೀಗ ಕುಟುಂಬ ಶಿಫ್ಟ್ ಆಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!