ಗದಗ: ತಾಲೂಕಿನ ಐತಿಹಾಸಿಕ ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾಗಿದ್ದು, ಗ್ರಾಮ ಸೇರಿ ಸುತ್ತಲಿನ ಜನರ ಆಕರ್ಷಣೆಯ ಕೇಂದ್ರವಾಗಿ ಮಾರ್ಪಟ್ಟಿದೆ.
ಗ್ರಾಮದ 4ನೇ ವಾರ್ಡಿನ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆಗೆ ಅಡಿಪಾಯ ಅಗೆಯುವ ಸಂದರ್ಭದಲ್ಲಿ ನಿಧಿ ಸಿಕ್ಕಿದ್ದರಿಂದ ಗ್ರಾಮಸ್ಥರು ತಂಡೋಪ ತಂಡವಾಗಿ ವೀಕ್ಷಣೆಗೆ ಆಗಮಿಸುತ್ತಿದ್ದಾರೆ.
ಅಂದಾಜು ಅರ್ಧ ಕೆಜಿಗೂ ಅಧಿಕ ತೂಕದ ಪುರಾತನ ಕಾಲದ ಚಿನ್ನಾಭರಣಗಳು, ಬಂಗಾರದ ನಾಣ್ಯಗಳು ದೊರೆತಿದ್ದು, ಸ್ಥಳಕ್ಕೆ ಲಕ್ಕುಂಡಿ ಪ್ರಾಧಿಕಾರದ ಸದಸ್ಯರು ಮತ್ತು ಪುರಾತತ್ವ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.




