Ad imageAd image

ಬೆಳಗಾವಿಯಲ್ಲಿ ಕುಳಿತು ಅಮೆರಿಕನರನ್ನ ವಂಚಿಸುತ್ತಿದ್ದ ಗ್ಯಾಂಗ್ ಅಂದರ್

Bharath Vaibhav
ಬೆಳಗಾವಿಯಲ್ಲಿ ಕುಳಿತು ಅಮೆರಿಕನರನ್ನ ವಂಚಿಸುತ್ತಿದ್ದ ಗ್ಯಾಂಗ್ ಅಂದರ್
WhatsApp Group Join Now
Telegram Group Join Now

ಬೆಳಗಾವಿ : ಸಾಮಾನ್ಯವಾಗಿ ದೇಶದಲ್ಲಿ ಎಲ್ಲೇ ಸೈಬರ್ ವಂಚನೆ ಪ್ರಕರಣಗಳು ನಡೆದರೂ ಅದರ ಹಿಂದೆ ವಿದೇಶಿ ವಂಚಕರ ಕೈವಾಡ ಇರೋದು ಕೇಳಿದ್ದೇವೆ.

ಆದರೆ ಇದೀಗ ಬೆಳಗಾವಿಯಲ್ಲೇ ಕುಳಿತು ಅಮೆರಿಕದ ನಾಗರಿಕರಿಗೆ ಮಂಕು ಬೂದಿ ಎರಚಿ ವಂಚನೆ ಎಸುಗುತ್ತಿದ್ದ 33 ಸೈಬರ್ ವಂಚಕರನ್ನು ಬೆಳಗಾವಿ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಸಾಮಾನ್ಯವಾಗಿ ಕರ್ನಾಟಕದಲ್ಲಿ ಎಲ್ಲೇ ಸೈಬರ್‌ ವಂಚನೆ ನಡೆದರೂ, ಅದರ ಹಿಂದೆ ವಿದೇಶಿಗರ ಲಿಂಕ್‌ ಇರುತ್ತಿತ್ತು. ಆದ್ರೆ ಈಗ ಕುಂದಾನಗರಿಯಲ್ಲಿ ನಡೆದಿರೋದೇ ಬೇರೆ. ಬೆಳಗಾವಿಯಲ್ಲಿ ಕುಳಿತು ವಿಶ್ವದ ದೊಡ್ಡಣ್ಣ ಎನ್ನುವ ಅಮೆರಿಕದ ನಾಗರಿಕರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಕಾಲ್ ಸೆಂಟರ್ ಹೆಸರಿನಲ್ಲಿ ಅನುಮತಿ ಪಡೆದು ವಂಚಿಸುತ್ತಿದ್ದ ಸೈಬರ್‌ ವಂಚಕರನ್ನ ಬೆಳಗಾವಿ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ.

ಆರೋಪಿಗಳು ಬೆಳಗಾವಿಯ ಅಜಮ್ ನಗರದ ಕುಮಾರ್ ಹಾಲ್‌ನಲ್ಲಿ ಬಾಡಿಗೆ ಮನೆ ಪಡೆದು ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಕಾಲ್‌ ಸೆಂಟರ್‌ ಹೆಸರಿನಲ್ಲಿ ದಂಧೆ ಶುರು ಮಾಡಿದ್ದರು. ಪ್ರತಿದಿನ ನೂರಾರು ಜನರಿಗೆ ಕರೆ ಮಾಡಿ ಯಾಮಾರಿಸುತ್ತಿದ್ದರು.

ಬಳಿಕ ಅಮೆರಿಕದ ಹಿರಿಯ ನಾಗರಿಕರನ್ನ ಟಾರ್ಗೆಟ್‌ ಮಾಡಿದ್ದರು. ಡಾರ್ಕ್‌ ವೆಬ್‌ನಲ್ಲಿ ನಂಬರ್‌ ತೆಗೆದು ಕರೆ ಮಾಡುತ್ತಿದ್ದರು. ನಿಮ್ಮ ಹೆಸರಿನಲ್ಲಿ ಪಾರ್ಸಲ್‌ ಬಂದಿದೆ ಎಂದು ಹೇಳುತ್ತಿದ್ದರು.

ಪಾರ್ಸೆಲ್‌ ಬಂದಿಲ್ಲ ಅಂತ ಗ್ರಾಹಕರು ಪ್ರತಿಕ್ರಿಯಿಸಿದ್ರೆ, ಅದನ್ನ ಕ್ಯಾನ್ಸಲ್‌ ಮಾಡಿ ಅಂತ ಬೇರೆ ನಂಬರ್‌ ಕೊಡ್ತಿದ್ದರು. ಆ ನಂಬರ್‌ಗೆ ಕರೆ ಮಾಡಿದಾಗ ಯಾಮಾರಿಸಿ ಹಣ ಎಗರಿಸುತ್ತಿದ್ದರು. ಫೆಡರಲ್ ಟ್ರೆಡ್ ಕಮಿಷನರ್ ಅಂತಾ ಹೆಸರು ಹೇಳಿ ವಂಚನೆ ವಂಚನೆ ಮಾಡುತ್ತಿದ್ದರು. ಇದೇ ರೀತಿ ಒಬ್ಬೊಬ್ಬರಿಗೆ ಒಂದೊಂದು ಕಥೆ ಹೇಳಿ ವಂಚಿಸುತ್ತಿದ್ದರು.

ಪೊಲೀಸರ ತಪಾಸಣೆ ಬಳಿಕ ಉತ್ತರ ಭಾರತ ಮೂಲದ 33 ಮಂದಿ ಆರೋಪಿಗಳನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತರಿಂದ 37 ಲ್ಯಾಪ್ ಟಾಪ್, 37 ಮೊಬೈಲ್‌ಗಳ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!